ADVERTISEMENT

150 ಕೌಶಲಾಭಿವೃದ್ಧಿ ಕೇಂದ್ರ ಸ್ಥಾಪನೆ: ಡಾ.ಎಸ್. ಸೆಲ್ವಕುಮಾರ್

​ಪ್ರಜಾವಾಣಿ ವಾರ್ತೆ
Published 9 ಜುಲೈ 2022, 18:50 IST
Last Updated 9 ಜುಲೈ 2022, 18:50 IST
ರಾಜ್ಯ ಕೌಶಲ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ (ಎಡಬದಿ) ಅವರಿಗೆ ದಲಿತ ಉದ್ದಿಮೆದಾರರ ಸಂಘದ ಕಾರ್ಯಾಧ್ಯಕ್ಷ ಸಿ.ಜಿ.ಶ್ರೀನಿವಾಸನ್ ಅವರು ಪುಸ್ತಕಗಳನ್ನು ನೀಡಿದರು
ರಾಜ್ಯ ಕೌಶಲ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ (ಎಡಬದಿ) ಅವರಿಗೆ ದಲಿತ ಉದ್ದಿಮೆದಾರರ ಸಂಘದ ಕಾರ್ಯಾಧ್ಯಕ್ಷ ಸಿ.ಜಿ.ಶ್ರೀನಿವಾಸನ್ ಅವರು ಪುಸ್ತಕಗಳನ್ನು ನೀಡಿದರು   

ಬೆಂಗಳೂರು: ರಾಜದಲ್ಲಿ 150 ಸ್ಥಳಗಳಲ್ಲಿ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗಿದ್ದು, ಅಲ್ಲಿ ಆಧುನಿಕ ಯಂತ್ರೋಪಕರಣ ಅಳವಡಿಸಲಾಗಿದೆ ಎಂದು ರಾಜ್ಯ ಕೌಶಲ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಹೇಳಿದರು.

ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರದ ಸಹಯೋಗದಲ್ಲಿ ಕರ್ನಾಟಕ ದಲಿತ ಉದ್ದಿಮೆದಾರರ ಸಂಘವು ಆಯೋ ಜಿಸಿದ್ದ ವಿಚಾರಸಂಕಿರಣದಲ್ಲಿ ಮಾತ ನಾಡಿ, ‘ಐ.ಟಿ ಕಂಪನಿಗಳಲ್ಲಿ ಕೆಲಸ ಮಾಡಲು ಬಯಸುವ ಹಾಗೂ ಸ್ವಂತ ಉದ್ಯಮ ಸ್ಥಾಪಿಸಲು ಇಚ್ಛಿಸುವ ಯುವಜನರಿಗೆ ತಕ್ಕ ತರಬೇತಿ ನೀಡಲಾ ಗುವುದು. 23 ಕೌಶಲ ಕೋರ್ಸ್‌ಗಳನ್ನು ಶುರು ಮಾಡಲಾಗಿದ’ ಎಂದರು.

ಉದ್ಯಮ ಕ್ಷೇತ್ರದ ಅಗತ್ಯಕ್ಕೆ ತಕ್ಕಂತೆ ಕೌಶಲ ಅಭಿವೃದ್ಧಿಗೆ ₹5 ಸಾವಿರ ಕೋಟಿ ವೆಚ್ಚದಲ್ಲಿ ರಾಜ್ಯದ 150 ಐಟಿಐ ಕಾಲೇಜುಗಳಲ್ಲಿ ಕೌಶಲ ಅಭಿವೃದ್ಧಿ ಕೇಂದ್ರ ಆರಂಭಿಸಲಾಗಿದೆ ಎಂದರು. ದಲಿತ ಉದ್ದಿಮೆದಾರರ ಸಂಘದ ಕಾರ್ಯಾಧ್ಯಕ್ಷ ಸಿ.ಜಿ.ಶ್ರೀನಿವಾಸನ್ ಮಾತನಾಡಿ, ‘ಯುವ ಉದ್ದಿಮೆದಾರರ ಮುಂದೆ ಅವ ಕಾಶಗಳ ರಾಶಿಯಿದೆ. ಆದರೆ, ಅವುಗಳ ಸದ್ಬಳಕೆ ಮಾಡಿ ಕೊಳ್ಳಲು ಬೇಕಾದ ತಿಳಿವಳಿಕೆ ಕೊರತೆ ಇದೆ’ ಎಂದು ವಿಷಾದಿಸಿದರು.

ADVERTISEMENT

ಸಣ್ಣ ಕೈಗಾರಿಕೆ ಬೆಳೆಸಲು ಕೇಂದ್ರ ಸರ್ಕಾರವು ಪೂರಕ ನೀತಿ ರೂಪಿಸಿದೆ. ಶೇ 20ರಷ್ಟು ಉತ್ಪನ್ನಗಳನ್ನು ಸಣ್ಣ ಕೈಗಾರಿಕೆಗಳಿಂದ ಖರೀದಿಸಬೇಕು ಎನ್ನುವುದು ಕೇಂದ್ರದ ನೀತಿಯಾಗಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಡಾ.ಇ.ವೆಂಕಟಯ್ಯ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.