ADVERTISEMENT

ಕವಿ ಸಿದ್ದಲಿಂಗಯ್ಯ ಸ್ಮರಣೆ ನಾಳೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2021, 20:13 IST
Last Updated 19 ಜೂನ್ 2021, 20:13 IST
ಸಿದ್ಧಲಿಂಗಯ್ಯ
ಸಿದ್ಧಲಿಂಗಯ್ಯ   

ಬೆಂಗಳೂರು: ಡಾ. ಸಿದ್ದಲಿಂಗಯ್ಯ ಸ್ಮಾರಕ ಪ್ರತಿಷ್ಠಾನವು ಸೋಮವಾರ (ಜೂ.21) ಬೆಳಿಗ್ಗೆ 10 ಗಂಟೆಗೆ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಸಿದ್ಧಲಿಂಗಯ್ಯ ಅವರ ಸ್ಮರಣೆ ಹಾಗೂ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ.

ನುಡಿ ನಮನ ಕಾರ್ಯಕ್ರಮಕ್ಕೆ ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಅವರು ಚಾಲನೆ ನೀಡಲಿದ್ದು,
ಡಾ. ಸಿದ್ದಲಿಂಗಯ್ಯ ಅವರ ಸಮಗ್ರ ಕಾವ್ಯ ‘ಬೋಧಿ ವೃಕ್ಷದ ಕೆಳಗೆ’ ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಸ್. ಜಾಫೆಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೃತಿಯ ಕುರಿತು ವಿಮರ್ಶಕ
ಡಾ. ಬೈರಮಂಗಲ ರಾಮೇಗೌಡ ಮಾತನಾಡಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಕಾವ್ಯ ನಮನ ಕಾರ್ಯಕ್ರಮ ನಡೆಯಲಿದ್ದು, ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಗೀತ ನಮನ ಕಾರ್ಯಕ್ರಮ ನಡೆಯಲಿದೆ. ಸಿದ್ದಲಿಂಗಯ್ಯ ಅವರ ಕವಿತೆಗಳ ಗಾಯನ ನಡೆಯಲಿದೆ. ಜಾನಪದ ಗಾಯಕ ಬಾನಂದೂರು ಕೆಂಪಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ರಂಗಕರ್ಮಿ ಜನಾರ್ಧನ್ (ಜನ್ನಿ) ಭಾಗವಹಿಸಲಿದ್ದಾರೆ. ಆನ್‌ ಲೈನ್‌ನಲ್ಲಿ ಕಾರ್ಯಕ್ರಮದ ನೇರ ಪ್ರಸಾರ ಇರಲಿದೆಎಂದು ಪ್ರತಿಷ್ಠಾನದ ಅಧ್ಯಕ್ಷೆ ಡಾ.ಮಾನಸ ಸಿದ್ದಲಿಂಗಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.