ADVERTISEMENT

ಡಾ. ವಿಜಯಲಕ್ಷ್ಮಿ ದೇಶಮಾನೆಗೆ ‘ಯಶೋಧರಮ್ಮ ದಾಸಪ್ಪ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 7 ಮೇ 2025, 4:25 IST
Last Updated 7 ಮೇ 2025, 4:25 IST
   

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ 2025ನೇ ಸಾಲಿನ ‘ಯಶೋಧರಮ್ಮ ದಾಸಪ್ಪ ಪ್ರಶಸ್ತಿ’ಗೆ ಕ್ಯಾನ್ಸರ್‌ ತಜ್ಞೆ ಡಾ. ವಿಜಯಲಕ್ಷ್ಮಿ ದೇಶಮಾನೆ ಆಯ್ಕೆಯಾಗಿದ್ದಾರೆ. 

ಪ್ರಶಸ್ತಿಯು ₹15 ಸಾವಿರ ನಗದು, ಕಂಚಿನ ಫಲಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

‘ಡಾ. ವಿಜಯಲಕ್ಷ್ಮಿ ದೇಶಮಾನೆ ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕ್ಯಾನ್ಸರ್‌ ವಿರುದ್ಧ ಹೋರಾಡುವ ಜನರಿಗೆ ಸಹಾಯ ಮಾಡಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್‌ ಪೀಡಿತರಿಗೆ ಉಚಿತ ಚಿಕಿತ್ಸೆಯನ್ನು ನೀಡಿದ್ದಾರೆ. ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ಸ್ತನ ಕ್ಯಾನ್ಸರ್‌ ಸಂಶೋಧನೆಯಲ್ಲಿ ಪ್ರವರ್ತಕರಾಗಿರುವ ವಿಜಯಲಕ್ಷ್ಮಿ ಅವರು ಗಂಥಿ ಕ್ಷೇತ್ರಕ್ಕೂ ಗಮನಾರ್ಹ ಕೊಡುಗೆ ನೀಡುವ ಪರಿಣಾಮಕಾರಿ ಅಧ್ಯಯನಗಳನ್ನು ನಡೆಸಿದ್ದಾರೆ’ ಎಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.

ADVERTISEMENT

ಮೇ 28ರಂದು ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ. ಕೃಷ್ಣ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ರೈತ ಹೋರಾಟಗಾರ್ತಿ ಸುನಂದಾ ಜಯರಾಂ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.