ADVERTISEMENT

ವಿಷ್ಣುವರ್ಧನ್ ಸ್ಮಾರಕ: ಇದೇ 18ರಿಂದ ಅನಿರ್ದಿಷ್ಟಾವಧಿ ಧರಣಿ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2023, 15:33 IST
Last Updated 16 ಡಿಸೆಂಬರ್ 2023, 15:33 IST
ವಿಷ್ಣುವರ್ಧನ್
ವಿಷ್ಣುವರ್ಧನ್   

ಬೆಂಗಳೂರು: ‘ಅಭಿಮಾನ್ ಸ್ಟುಡಿಯೋದಲ್ಲಿ ನಟ ವಿಷ್ಣುವರ್ಧನ್‌ ಸ್ಮಾರಕ ನಿರ್ಮಿಸಲು 10 ಗುಂಟೆ ಭೂಮಿ ನೀಡುವಂತೆ ಆಗ್ರಹಿಸಿ ಇದೇ 18ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು’ ಎಂದು ಡಾ. ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್‌ ತಿಳಿಸಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್‌ನ ಅಧ್ಯಕ್ಷ ರಾಜುಗೌಡ, ‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣುವರ್ಧನ್‌ ಅವರ ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಭೂಮಿ ಒದಗಿಸುವಂತೆ ಈಗಾಗಲೇ ಹೈಕೋರ್ಟ್‌ ಹೇಳಿದೆ. ಆದರೆ, ರಾಜ್ಯ ಸರ್ಕಾರ ವಿಷ್ಣುವರ್ಧನ್‌ ಅವರ ಸಮಾಧಿ ವಿಷಯದಲ್ಲಿ ಅನ್ಯಾಯ ಮಾಡುತ್ತಲೇ ಬಂದಿವೆ. ಡಿ.30ರಂದು ವಿಷ್ಣುವರ್ಧನ್‌ ಅವರ ಪುಣ್ಯಸ್ಮರಣೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಭೂಮಿ ವಿವಾದವನ್ನು ಇತ್ಯರ್ಥಪಡಿಸಬೇಕು’ ಎಂದು ಆಗ್ರಹಿಸಿದರು.

‘ವಿಷ್ಣುವರ್ಧನ್‌ ಸಮಾಧಿಯ ಭೂಮಿಗೆ ಸಂಬಂಧಿಸಿದ ಪ್ರಕರಣವನ್ನು 2023ರ ಆ. 21ರಂದು ಹೈಕೋರ್ಟ್‌ ವಜಾಗೊಳಿಸಿದೆ. ಆದ್ದರಿಂದ, ಸರ್ಕಾರ ಕೂಡಲೇ ಅಭಿಮಾನ್‌ ಸ್ಟುಡಿಯೋದ ಮಾಲೀಕರೊಂದಿಗೆ ಸಭೆ ನಡೆಸಿ ವಿಷ್ಣುವರ್ಧನ್‌ ಸಮಾಧಿಯ 10 ಗುಂಟೆ ಜಾಗದ ಪ್ರಕರಣವನ್ನು ಇತ್ಯರ್ಥಪಡಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ಶ್ರೀಧರ್‌ ಮೂರ್ತಿ, ವಕೀಲರಾದ ಅರುಣ್ ಕುಮಾರ್, ಸಮಾಜ ಸೇವಕ ಬಿ.ವೈ. ರಮೇಶ್, ವಿಷ್ಣು ನಾರಾಯಣ್ ಕಟ್ಟೆ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.