ADVERTISEMENT

28ಕ್ಕೆ ಒಳಚರಂಡಿ ಸಹಾಯಕರ ಪ್ರತಿಭಟನೆ: ನಾರಾಯಣ್

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2022, 19:31 IST
Last Updated 23 ಮಾರ್ಚ್ 2022, 19:31 IST

ಬೆಂಗಳೂರು: ‘ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 544 ಮಂದಿ ಒಳಚರಂಡಿ ಸಹಾಯಕರನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ಮಾರ್ಚ್‌ 28ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದುಪಾಲಿಕೆ ಒಳಚರಂಡಿ ಸಹಾಯಕರು ಮತ್ತು ಪೌರ ಕಾರ್ಮಿಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ನಾರಾಯಣ್ ತಿಳಿಸಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಒಳಚರಂಡಿ ಸಹಾಯಕರುಒಳಚರಂಡಿ ಸ್ವಚ್ಛತಾ ಕೆಲಸ ಮಾಡುವಾಗಲೇ ಮೃತಪಟ್ಟಿದ್ದಾರೆ. ಅನೇಕರು ಗಾಯಗೊಂಡಿದ್ದು, ಚರ್ಮರೋಗ ಕಾಯಿಲೆಗಳಿಗೆ ತುತ್ತಾಗಿದ್ದಾರೆ. ರಾಜ್ಯದ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವರ್ಷಕ್ಕೆ ಸುಮಾರು ಆರು ಮಂದಿ ಮೃತಪಡುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಗುತ್ತಿಗೆ ಪೌರಕಾರ್ಮಿಕರಿಗೆ ಸಿಗುತ್ತಿರುವ ಯಾವ ಸೌಲಭ್ಯಗಳೂಒಳಚರಂಡಿ ಸಹಾಯಕರಿಗೆ ಸಿಗುತ್ತಿಲ್ಲ. ಇವರನ್ನು ಕಾಯಂಗೊಳಿಸಿ, ಎಲ್ಲ ಸೌಕರ್ಯಗಳನ್ನು ಕಲ್ಪಿಸಬೇಕು. ಈ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.