ADVERTISEMENT

ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ– 16 ಮಂದಿ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 23 ಜನವರಿ 2024, 15:28 IST
Last Updated 23 ಜನವರಿ 2024, 15:28 IST
ಶಾಲಾ ವಾಹನ ಚಾಲಕರನ್ನು ತಪಾಸಣೆ ನಡೆಸಿದ ಸಂಚಾರ ಪೊಲೀಸರು.
ಶಾಲಾ ವಾಹನ ಚಾಲಕರನ್ನು ತಪಾಸಣೆ ನಡೆಸಿದ ಸಂಚಾರ ಪೊಲೀಸರು.   

ಬೆಂಗಳೂರು: ಮದ್ಯ ಸೇವಿಸಿ, ಶಾಲಾ ವಾಹನಗಳನ್ನು ಚಾಲನೆ ಮಾಡುತ್ತಿದ್ದ ಚಾಲಕರ ವಿರುದ್ಧ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, 16 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳವಾರ ಬೆಳಿಗ್ಗೆ 7ರಿಂದ 9.30ರ ವರೆಗೆ ‌ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು 3,414 ವಾಹನಗಳನ್ನು ತಪಾಸಣೆಗೆ ಒಳಪಡಿಸಿದ್ದರು. ಅದರಲ್ಲಿ, 16 ಚಾಲಕರು ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT