ADVERTISEMENT

ಕೊಡಿಗೇಹಳ್ಳಿ ಶಾಖಾ ಗ್ರಂಥಾಲಯ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2023, 16:03 IST
Last Updated 22 ಅಕ್ಟೋಬರ್ 2023, 16:03 IST
ಸಹಕಾರನಗರದಲ್ಲಿ ಕೊಡಿಗೇಹಳ್ಳಿ ಶಾಖಾ ಗ್ರಂಥಾಲಯವನ್ನು ಸಚಿವ ಕೃಷ್ಣಬೈರೇಗೌಡ ಉದ್ಘಾಟಿಸಿದರು. ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್ ಕುಮಾರ್ ಹೊಸಮನಿ, ಪಾಲಿಕೆ ಮಾಜಿ ಸದಸ್ಯ ಕೆ.ಎಂ. ಚೇತನ್, ಕಾಂಗ್ರೆಸ್ ಮುಖಂಡರಾದ ಎನ್.ಎನ್.ಶ್ರೀನಿವಾಸಯ್ಯ, ಕೆ. ಆರ್.ರಾಜು ಇದ್ದರು. 
ಸಹಕಾರನಗರದಲ್ಲಿ ಕೊಡಿಗೇಹಳ್ಳಿ ಶಾಖಾ ಗ್ರಂಥಾಲಯವನ್ನು ಸಚಿವ ಕೃಷ್ಣಬೈರೇಗೌಡ ಉದ್ಘಾಟಿಸಿದರು. ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್ ಕುಮಾರ್ ಹೊಸಮನಿ, ಪಾಲಿಕೆ ಮಾಜಿ ಸದಸ್ಯ ಕೆ.ಎಂ. ಚೇತನ್, ಕಾಂಗ್ರೆಸ್ ಮುಖಂಡರಾದ ಎನ್.ಎನ್.ಶ್ರೀನಿವಾಸಯ್ಯ, ಕೆ. ಆರ್.ರಾಜು ಇದ್ದರು.    

ಯಲಹಂಕ: ಸಹಕಾರನಗರದ ಕೊಡಿಗೇಹಳ್ಳಿ ವಾರ್ಡ್‌ ಕಚೇರಿ ಕಟ್ಟಡದ ಮೊದಲನೇ ಮಹಡಿಯಲ್ಲಿ ನೂತನವಾಗಿ ಆರಂಭಿಸಿರುವ ಕೊಡಿಗೇಹಳ್ಳಿ ಶಾಖಾ ಗ್ರಂಥಾಲಯವನ್ನು ಸಚಿವ ಕೃಷ್ಣ ಬೈರೇಗೌಡ ಉದ್ಘಾಟಿಸಿದರು.

ಎರಡು ವರ್ಷಗಳ ಸತತ ಪ್ರಯತ್ನ ಹಾಗೂ ಗ್ರಂಥಾಲಯ ಇಲಾಖೆಯ ಸಹಕಾರದಿಂದ ಇಲ್ಲಿ ಡಿಜಿಟಲ್ ಸೌಲಭ್ಯ ಒಳಗೊಂಡಂತೆ ನೂತನವಾಗಿ ಸಾರ್ವಜನಿಕ ಗ್ರಂಥಾಲಯ ಆರಂಭಿಸಲಾಗಿದೆ. ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಸಾವಿರಾರು ಪುಸ್ತಕಗಳು ದೊರೆಯಲಿವೆ ಎಂದು ಸಚಿವರು ತಿಳಿಸಿದರು.

ಹಿರಿಯ ನಾಗರಿಕರು ಮನೆಯಲ್ಲಿ ಕೂರುವುದಕ್ಕಿಂತ ಹೊರಗೆಬಂದು ಓದುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯವೂ ಸುಧಾರಣೆಯಾಗುತ್ತದೆ. ಈ ಕೇಂದ್ರವನ್ನು ಹೆಚ್ಚು ಬಳಕೆ ಮಾಡಿಕೊಂಡರೆ  ಗ್ರಂಥಾಲಯವನ್ನು ಮೇಲ್ದರ್ಜೆಗೇರಿಸಿ, ಹೆಚ್ಚಿನ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ADVERTISEMENT

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್ ಕುಮಾರ್ ಹೊಸಮನಿ ಮಾತನಾಡಿ, ‘ಈ ಗ್ರಂಥಾಲಯದಲ್ಲಿ 25 ಸಾವಿರಕ್ಕೂ ಹೆಚ್ಚು ಸಾಹಿತ್ಯಿಕ, ವಿವಿಧ ಗ್ರಂಥಗಳು, ಕಲೆ, ನಾಟಕ, ಕಾವ್ಯ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಹಾಗೂ ವಿಶೇಷವಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಪುಸ್ತಕಗಳು ಲಭ್ಯವಿವೆ. ನೂರಕ್ಕೂ ಹೆಚ್ಚು ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳು ಈ ಕೇಂದ್ರದಲ್ಲಿವೆ’ ಎಂದು ವಿವರ ನೀಡಿದರು.

ಪಾಲಿಕೆ ಮಾಜಿ ಸದಸ್ಯ ಕೆ.ಎಂ. ಚೇತನ್, ಕಾಂಗ್ರೆಸ್ ಮುಖಂಡರಾದ ಎನ್.ಎನ್. ಶ್ರೀನಿವಾಸಯ್ಯ, ಎಂ. ಜಯಗೋಪಾಲಗೌಡ, ಕೆ.ಆರ್. ನಟರಾಜ್, ಮುರಳಿ ಹನುಮಂತೇಗೌಡ, ಕೆ.ಆರ್. ರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.