ADVERTISEMENT

ಚಾಲಕರ ಪ್ರತಿಭಟನೆ: ಇಂದು ಆಟೊ ಸಂಚಾರದಲ್ಲಿ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2023, 21:02 IST
Last Updated 19 ಮಾರ್ಚ್ 2023, 21:02 IST
   

ಬೆಂಗಳೂರು: ‘ರ‍್ಯಾಪಿಡೊ ಹಾಗೂ ಇತರೆ ಕಂಪನಿಗಳ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಬೇಕು’ ಎಂದು ಆಗ್ರಹಿಸಿ ಆಟೊ ಚಾಲಕರು ಪ್ರತಿಭಟನೆಗೆ ಕರೆ ನೀಡಿದ್ದು, ಭಾನುವಾರ ರಾತ್ರಿ 12 ಗಂಟೆಯಿಂದ ಹಲವೆಡೆ ಆಟೊ ಸಂಚಾರವನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ.

‘ನಗರದಲ್ಲಿ ಅಕ್ರಮ ವಾಗಿ ಸಂಚರಿಸುತ್ತಿರುವ ವೈಟ್ ಬೋರ್ಡ್ ಟ್ಯಾಕ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಬೇಡಿಕೆ ಈಡೇರಿಕೆಗೆ ಮೂರು ದಿನಗಳ ಗಡುವು ನೀಡ ಲಾಗಿತ್ತು. ಆದರೆ, ಯಾವುದೇ ಸ್ಪಂದನ ದೊರೆತಿಲ್ಲ. ಹೀಗಾಗಿ, ಆಟೊ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ಚಾಲಕರು ಹೇಳಿದರು.

‘ಭಾನುವಾರ ರಾತ್ರಿ 12 ಗಂಟೆ ಯಿಂದ ಸೋಮವಾರ ರಾತ್ರಿ 12 ಗಂಟೆಯವರೆಗೆ ಬಹುತೇಕ ಆಟೊ ಗಳು ರಸ್ತೆಗೆ ಇಳಿ ಯುವುದಿಲ್ಲ. ಸೋಮವಾರ ಬೆಳಿಗ್ಗೆ ಆಟೊಗಳ ಸಮೇತ ಮುಖ್ಯಮಂತ್ರಿ ಮನೆ ಯವರೆಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು’ ಎಂದರು.

ADVERTISEMENT

‘ಆಟೊ ನಂಬಿ ಜೀವನ ನಡೆಸು ತ್ತಿದ್ದೇವೆ. ಕಾಲ ಕಾಲಕ್ಕೆ ತೆರಿಗೆ ಪಾವತಿ ಮಾಡುತ್ತಿದ್ದೇವೆ. ಇತ್ತೀಚಿನ ದಿನ ಗಳಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸರ್ಕಾರ ಅನುಮತಿ ನೀಡಿದ್ದು, ಇದರಿಂದ ಆಟೊ ಚಾಲಕರು ಸಂಕಷ್ಟಕ್ಕೆ ಸಿಲುಕಿ ದ್ದಾರೆ’ ಎಂದು ಚಾಲಕರು ಅಳಲು ತೋಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.