ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದ ಆರೋಪಿಗಳ ಜೊತೆ ಸಂಪರ್ಕವಿಟ್ಟುಕೊಂಡಿದ್ದ ಎನ್ನಲಾದ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಅವರ ಮಗ ಬಿನೀಶ್‌ನನ್ನು ರಾಷ್ಟ್ರೀಯ ಮಾದಕ ದ್ರವ್ಯ ನಿಗ್ರಹ ದಳದ (ಎನ್‌ಸಿಬಿ) ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಸಿನಿ ತಾರೆಯರು, ಉದ್ಯಮಿಗಳು ಸೇರಿದಂತೆ ಹಲವು ಗಣ್ಯರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪದಡಿ ಕೆಲ ಆರೋಪಿಗಳನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಆ ಪೈಕಿ ಆರೋಪಿ ಅನೂಪ್ ಎಂಬಾತನ ಜೊತೆ ಹಣಕಾಸಿನ ವ್ಯವಹಾರ ನಡೆಸಿದ್ದ ಆರೋಪದಡಿ ಬಿನೀಶ್‌ನನ್ನು ಬಂಧಿಸಿದ್ದ ಇ.ಡಿ ಅಧಿಕಾರಿಗಳು, ಆತನನ್ನು ಕಸ್ಟಡಿಗೆ ಪಡೆದಿದ್ದರು. ಕಸ್ಟಡಿ ಅವಧಿ ಮುಗಿದಿದ್ದರಿಂದ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ‘ಡ್ರಗ್ಸ್ ಪ್ರಕರಣದಲ್ಲೂ ಬಿನೀಶ್ ಭಾಗಿಯಾಗಿರುವ ಅನುಮಾನವಿದೆ. ಆತನನ್ನು ವಿಚಾರಣೆಗೆ ಒಳಪಡಿಸಬೇಕಿದ್ದು, ಕಸ್ಟಡಿಗೆ ನೀಡಿ’ ಎಂದು ಎನ್‌ಸಿಬಿ ಅಧಿಕಾರಿಗಳು ನ್ಯಾಯಾಲಯವನ್ನು ಕೋರಿದ್ದರು.
ಅರ್ಜಿ ಪುರಸ್ಕರಿಸಿದ ನ್ಯಾಯಾಲಯ, ನ. 20ರವರೆಗೆ ಬಿನೀಶ್‌ನನ್ನು ಎನ್‌ಸಿಬಿ ಕಸ್ಟಡಿಗೆ ಒಪ್ಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.