
ಪ್ರಜಾವಾಣಿ ವಾರ್ತೆ
ಬೆಂಗಳೂರು: ಡ್ರಗ್ ಮಾಫಿಯಾ ಸಂಬಂಧ ಆಫ್ರಿಕಾ ಪ್ರಜೆ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಗುರುವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.
ಪೆಡ್ಲರ್ ಆಗಿದ್ದ ಮೂವರೂ ಹಲವರಿಗೆ ಡ್ರಗ್ ಪೂರೈಕೆ ಮಾಡಿದ್ದ ಮಾಹಿತಿ ಸಿಸಿಬಿಗೆ ಲಭಿಸಿದೆ. ಅದರ ಆಧಾರದಲ್ಲೇ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು, ಚಾಮರಾಜಪೇಟೆಯಲ್ಲಿರುವ ಕಚೇರಿಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.
ಈ ಹಿಂದೆ ಕೊಕೇನ್ ಸಾಗಣೆ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿ ಜಾಮೀನು ಮೇಲೆ ಹೊರಬಂದಿದ್ದ ಪ್ರತೀಕ್ ಶೆಟ್ಟಿ ಹಾಗೂ ಆತನ ಸ್ನೇಹಿತನನ್ನು ವಶಕ್ಕೆ ಪಡೆದಿರುವುದಾಗಿ ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.