ಬೆಂಗಳೂರು: ಡಾರ್ಕ್‌ನೆಟ್ ಜಾಲತಾಣಗಳ ಮೂಲಕ ಡ್ರಗ್ಸ್ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅವರಿಂದ ₹2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
'ವೈಟ್‌ಫೀಲ್ಡ್ ವಿಭಾಗದಲ್ಲಿ ಕಾರ್ಯಾಚರಣೆ ನಡೆಸಿ ಹೊರ ರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇವರು ವಿದೇಶದಿಂದ ಡ್ರಗ್ಸ್ ತರಿಸಿ ಮಾರುತ್ತಿದ್ದರು' ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
'ಬಾಡಿಗೆ ಮನೆಯಲ್ಲಿ ವಾಸವಿದ್ದ ಆರೋಪಿಗಳು, ಅದೇ ಮನೆಯಲ್ಲೇ ಡ್ರಗ್ಸ್ ಸಂಗ್ರಹಿಸಿಟ್ಟುಕೊಂಡಿದ್ದರು. ಎಂಡಿಎಂಎ, ಎಕ್ಸೈಟೆಸ್ಸಿ ಮಾತ್ರೆಗಳು, ಗಾಂಜಾ ಎಣ್ಣೆ ಹಾಗೂ ಇತರೆ ಡ್ರಗ್ಸ್ ಮನೆಯಲ್ಲಿತ್ತು' ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.