ADVERTISEMENT

ಡ್ರಗ್ಸ್‌ ಮಾರುತ್ತಿದ್ದ ವಿದೇಶಿ ಪ್ರಜೆ ಬಂಧನ

​ಪ್ರಜಾವಾಣಿ ವಾರ್ತೆ
Published 3 ಜುಲೈ 2021, 18:22 IST
Last Updated 3 ಜುಲೈ 2021, 18:22 IST

ಬೆಂಗಳೂರು: ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ ಹಾಗೂ ಎಕ್ಸ್‌ಟೆಸಿ ಮಾತ್ರೆಗಳನ್ನು ನಗರದಲ್ಲಿ ಮಾರಾಟ ಮಾಡುತ್ತಿದ್ದ ಆರೋಪದಡಿ ವಿದೇಶಿ ಪ್ರಜೆಯನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.

ನಾಗವಾರದಲ್ಲಿ ವಾಸವಿದ್ದ ನೈಜೀರಿಯಾದ ಉಡೆಂಬಾ ಇಸಾಕ್ (42) ಬಂಧಿತ ಆರೋಪಿ.

‘ಹುಳಿಮಾವು ಠಾಣಾ ವ್ಯಾಪ್ತಿಯ ದೊಡ್ಡಕಮ್ಮನಹಳ್ಳಿ ಗ್ರಾಮದ ಬಳಿ ಇರುವ ವೈದ್ಯಕೀಯ ಕಾಲೇಜಿನ ಸಮೀಪ ಆರೋಪಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ. ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯಿಂದ 25 ಗ್ರಾಂ ಎಂಡಿಎಂಎ, 4 ಗ್ರಾಂ ತೂಕದ ಒಂಬತ್ತು ಎಕ್ಸ್‌ಟೆಸಿ ಮಾತ್ರೆಗಳನ್ನು ಜಪ್ತಿ ಮಾಡಲಾಯಿತು’ಎಂದು ಪೊಲೀಸರು ತಿಳಿಸಿದರು.

ADVERTISEMENT

‘2015ರಲ್ಲಿ ಭಾರತಕ್ಕೆ ಬಂದಿದ್ದ ಇಸಾಕ್, ಬೆಂಗಳೂರಿನಲ್ಲಿ ವಾಸವಾಗಿದ್ದ. ಅಮೀನ್ ಎಂಬ ಮತ್ತೊಬ್ಬ ವ್ಯಕ್ತಿ ಈತನಿಗೆ ಡ್ರಗ್ಸ್‌ ಸರಬರಾಜು ಮಾಡುತ್ತಿದ್ದ. ಅದನ್ನು ನಗರದ ವಿವಿಧ ಭಾಗಗಳಲ್ಲಿರುವ ಗ್ರಾಹಕರಿಗೆ ನೀಡಿ ಹಣ ಸಂಪಾದಿಸುತ್ತಿದ್ದ.’

‘ಆರೋಪಿಯ ವಿರುದ್ಧ ಕೊತ್ತನೂರು ಠಾಣೆಯಲ್ಲಿ ಈ ಹಿಂದೆಯೇ ಪ್ರಕರಣ ದಾಖಲಾಗಿತ್ತು. ಈಗಎನ್‌ಡಿಪಿಎಸ್ ಕಾಯ್ದೆ ಹಾಗೂ ವಿದೇಶಿಯರ ಕಾಯ್ದೆಯಡಿ‍ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.