ADVERTISEMENT

ಬೆಂಗಳೂರು: ಪಾದಚಾರಿ ಮಾರ್ಗದಲ್ಲಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿ ಸೆರೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2025, 14:47 IST
Last Updated 6 ಅಕ್ಟೋಬರ್ 2025, 14:47 IST
ಕುಶಾಲ್‌ 
ಕುಶಾಲ್‌    

ಬೆಂಗಳೂರು: ಕೆಂಪೇಗೌಡ ರಸ್ತೆಯ ಪಾದಚಾರಿ ಮಾರ್ಗದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಹಲಸೂರು ಗೇಟ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಲಕ್ಷ್ಮಿ ಲೇಔಟ್‌ ಗಾರವೇಬಾಯಿಪಾಳ್ಯದ ನಿವಾಸಿ ಕುಶಾಲ್‌ (31) ಬಂಧಿತ ಆರೋಪಿ.

ಆರೋಪಿಯಿಂದ ₹10.45 ಲಕ್ಷ ಮೌಲ್ಯದ 10 ಕೆ.ಜಿ. ಗಾಂಜಾ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ADVERTISEMENT

ಬಂಧಿತ ಆರೋಪಿಯು ಹೊರರಾಜ್ಯದಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ, ಹೆಚ್ಚಿನ ಬೆಲೆಗೆ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ. ಡ್ರಗ್ಸ್ ಮಾರಾಟದಿಂದ ಬಂದ ಹಣದಲ್ಲಿ ಮೋಜು-ಮಸ್ತಿ ಮಾಡುತ್ತಿದ್ದ. ಬಾತ್ಮೀದಾರರಿಂದ ಬಂದ ಖಚಿತ ಮಾಹಿತಿ ಆಧರಿಸಿ, ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.