ಬೆಂಗಳೂರು: ನಗರದಲ್ಲಿ ಡ್ರಗ್ ಪಾರ್ಟಿಗಳನ್ನು ಸಂಘಟಿಸುತ್ತಿದ್ದ ದೆಹಲಿಯ ವಿರೇನ್ ಖನ್ನಾ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಆತನನ್ನು ನಾಲ್ಕು ದಿನ ಕಸ್ಟಡಿಗೆ ಪಡೆದಿದ್ದಾರೆ.
‘ಡ್ರಗ್ ಪಾರ್ಟಿಗಳನ್ನು ಆತ ಆಯೋಜಿಸುತ್ತಿದ್ದ. ಅಲ್ಲಿಯೇ ಕೆಲ ನಟ–ನಟಿಯರು, ಗಣ್ಯ ವ್ಯಕ್ತಿಗಳ ಮಕ್ಕಳು ಪಾಲ್ಗೊಳ್ಳುತ್ತಿದ್ದರು. ಕೆಲ ಮಾಹಿತಿ ಕಲೆಹಾಕಿದ್ದ ಸಿಸಿಬಿ ವಿಶೇಷ ತಂಡ ದೆಹಲಿಗೆ ತೆರಳಿ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತಂದಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಇದನ್ನೂ ಓದಿ...ಡ್ರಗ್ ಮಾಫಿಯಾ: ಸಿಸಿಬಿ ಪೊಲೀಸರಿಂದ ನಟಿ ರಾಗಿಣಿ ದ್ವಿವೇದಿ ಬಂಧನ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.