ADVERTISEMENT

ಡ್ರಗ್ಸ್; ಇಬ್ಬರು ಪೆಡ್ಲರ್‌ಗಳ ಬಂಧನ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 20:51 IST
Last Updated 2 ಅಕ್ಟೋಬರ್ 2020, 20:51 IST
   

ಬೆಂಗಳೂರು: ಮುಂಬೈನಿಂದ ಡ್ರಗ್ಸ್ ಖರೀದಿಸಿ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ.

‘ಶಿವಾಜಿನಗರದ ಎಚ್‌ಕೆಪಿ ದರ್ಗಾ ಕಾಂಪೌಂಡ್ ನಿವಾಸಿ ಮೊಹಮ್ಮದ್ ಸಿಕಂದರ್ (27) ಹಾಗೂ ಬ್ರಾಡ್‌ವೇ ರಸ್ತೆಯ ಮುಜಾಯಿದ್ ಪಾಷಾ (21) ಬಂಧಿತರು. ಅವರಿಂದ 26.55 ಗ್ರಾಂ ತೂಕದ ಹೆರಾಯಿನ್ ಜಪ್ತಿ ಮಾಡಲಾಗಿದೆ’ ಎಂದು ಪೂರ್ವ ವಿಭಾಗದ ಡಿಸಿಪಿ ಎಸ್.ಡಿ. ಶರಣಪ್ಪ ಹೇಳಿದರು.

‘ಸಿಕಂದರ್ ಚಾಲಕನಾಗಿದ್ದ. ವೆಲ್ಡಿಂಗ್ ಮಳಿಗೆಯಲ್ಲೂ ಅರೆಕಾಲಿಕ ಕೆಲಸ ಮಾಡುತ್ತಿದ್ದ. ಮಾದಕ ವ್ಯಸನಿಯೂ ಆಗಿದ್ದ. ಹೆಚ್ಚಿನ ಹಣ ಸಂಪಾದಿಸುವ ಉದ್ದೇಶದಿಂದ ಮುಜಾಯಿದ್ ಜೊತೆ ಸೇರಿ ಡ್ರಗ್ಸ್ ಮಾರಾಟ ಮಾಡಲಾರಂಭಿಸಿದ್ದ’ ಎಂದೂ ತಿಳಿಸಿದರು.

ADVERTISEMENT

'ಗುರುವಾರ ರಾತ್ರಿ ತಿಮ್ಮಯ್ಯ ರಸ್ತೆಯಲ್ಲಿರುವ ಶಾಲೆಯೊಂದರ ಬಳಿ ಆರೋಪಿಗಳು ಡ್ರಗ್ಸ್ ಮಾರುತ್ತಿದ್ದರು. ಆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಸೆರೆ ಹಿಡಿಯಲಾಗಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.