
ಪ್ರಜಾವಾಣಿ ವಾರ್ತೆ
ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ಡ್ರಗ್ಸ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಹೊರ ರಾಜ್ಯದ ವ್ಯಕ್ತಿ ಸೇರಿ ಮೂವರನ್ನು ಜ್ಞಾನಭಾರತಿ ಹಾಗೂ ಕೊತ್ತನೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ₹4.90 ಲಕ್ಷ ಮೌಲ್ಯದ ವಿವಿಧ ಮಾದರಿಯ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಜ್ಞಾನಭಾರತಿ ಠಾಣೆಯ ಪೊಲೀಸರು, ಕೆಂಗೇರಿ 100 ಅಡಿ ರಸ್ತೆಯ ಉಲ್ಲಾಳ ಕೆರೆಯ ಪಕ್ಕದ ಬಸ್ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ, ಹೊರ ರಾಜ್ಯದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆತನಿಂದ 11 ಗ್ರಾಂ ಅಫೀಮ್ ಜಪ್ತಿ ಮಾಡಲಾಯಿತು ಎಂದು ಪೊಲೀಸರು ಹೇಳಿದರು.
ಕೊತ್ತನೂರು ಠಾಣೆಯ ಪೊಲೀಸರ ಕಾರ್ಯಾಚರಣೆ: ನಾಗೇನಹಳ್ಳಿಯ ವುಡ್ ಡಿಪೊ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಇಬ್ಬರನ್ನು ಬಂಧಿಸಿದ್ದಾರೆ. ನಾಲ್ಕು ಕೆ.ಜಿ ಗಾಂಜಾ ಹಾಗೂ 24 ಗ್ರಾಂ ಎಂಡಿಎಂಎ ಜಪ್ತಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.