ADVERTISEMENT

ಮಾದಕ ವಸ್ತು ಮಾರಾಟ: ವಿದೇಶಿಯರ ಸೆರೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2019, 2:46 IST
Last Updated 19 ನವೆಂಬರ್ 2019, 2:46 IST

ಬೆಂಗಳೂರು: ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಗಳನ್ನು ಬಂಧಿಸುವಲ್ಲಿ ಕೆ.ಜಿ ಹಳ್ಳಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೌತ್ ಸೂಡನ್ ಪ್ರಜೆಗಳಾದ ಅಡ್ವಕ್ ಸ್ಟೆಪನ್, ಡಾವೊಡ್, ಅನಿಲ್ ಬಂಧಿತರು. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.

ಆರೋಪಿಗಳು ನಾಗವಾರ ಬಳಿಯ ಹೌಸಿಂಗ್ ಸೊಸೈಟಿ ಲೇಔಟ್‌ನ ಇಂದಿರಾ ಕ್ಯಾಂಟೀನ್ ಬಳಿ ಮಾದಕ ವಸ್ತುಗಳನ್ನು ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಪಡೆದ ಕೆ.ಜಿ. ಹಳ್ಳಿ ಪೊಲೀಸರು ಪೂರ್ವವಿಭಾಗದ ಡಿಸಿಪಿ ಶರಣಪ್ಪ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳಿಂದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.