ADVERTISEMENT

ಮಾದಕ ದ್ರವ್ಯ ಮಾರಾಟ: ಜಾಮೀನು ನೀಡಲು ನಿರಾಕರಿಸಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2024, 18:48 IST
Last Updated 7 ಮಾರ್ಚ್ 2024, 18:48 IST
<div class="paragraphs"><p> ಹೈಕೋರ್ಟ್‌ ಆದೇಶ</p></div>

ಹೈಕೋರ್ಟ್‌ ಆದೇಶ

   

ಬೆಂಗಳೂರು: ‘ಮಾದಕ ದ್ರವ್ಯ ಸಂಗ್ರಹಣೆ ಹಾಗೂ ಮಾರಾಟವು ಸಾಮಾಜಿಕ ಅನಿಷ್ಟ ಮಾತ್ರವಲ್ಲದೆ, ರಾಜ್ಯದ ಆರ್ಥಿಕ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರುವ ಗಂಭೀರ ಅಪರಾಧ’ ಎಂದು ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್‌, ಎಂಡಿಎಂಎ ಮಾದಕ ದ್ರವ್ಯ ಹೊಂದಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಇಬ್ಬರಿಗೆ ಜಾಮೀನು ನೀಡಲು ನಿರಾಕರಿಸಿದೆ.

ಜಾಮೀನು ಕೋರಿ ರಾಜಸ್ಥಾನದ ಸುನೀಲ್‌ ಕುಮಾರ್‌ (28) ಮತ್ತು ಬೆಂಗಳೂರಿನ ಕೊಡುಗೆಹಳ್ಳಿ ನಿವಾಸಿ ಅಶೋಕ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರಿದ್ದ ಏಕಸದಸ್ಯ ನ್ಯಾಯಪಪೀಠ ತಿರಸ್ಕರಿಸಿದೆ. 

ADVERTISEMENT

‘ಮಾದಕ ದ್ರವ್ಯ ಮಾರಾಟಕ್ಕೆ ವಿಶೇಷವಾಗಿ ಶಾಲಾ ಕಾಲೇಜಿನ ವಿದ್ಯಾರ್ಥಿ ಸಮುದಾಯವನ್ನು ಗುರಿಯಾಗಿಸಿಕೊಳ್ಳಲಾಗಿದೆ. ಹಾಗಾಗಿ, ಈ ಘಟನೆಯನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ’ ಎಂದು ನ್ಯಾಯಪೀಠ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.