ಮಾದಕ ವಸ್ತು (ಸಂಗ್ರಹ ಚಿತ್ರ)
ಬೆಂಗಳೂರು: ನಗರದ ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿಯ ಖಾಲಿ ಪ್ರದೇಶಗಳಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಹದೇವಪುರ, ಕಲಾಸಿಪಾಳ್ಯ, ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು, ವಿವಿಧೆಡೆ ಕಾರ್ಯಾಚರಣೆ ನಡೆಸಿ ಆರೋಪಿಗಳಿಂದ ವಿವಿಧ ಮಾದರಿಯ 32 ಕೆ.ಜಿ. ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಇದರ ಮೌಲ್ಯ ₹ 17.50 ಲಕ್ಷ ಎಂದು ಅಂದಾಜಿಸಲಾಗಿದೆ.
ಆರೋಪಿಗಳು ಹೊರ ರಾಜ್ಯಗಳಿಂದ ಹಣ್ಣಿನ ಪೆಟ್ಟಿಗೆಗಳಲ್ಲಿ ಗಾಂಜಾ, ಅಫೀಮ್ ಅನ್ನು ತಂದು ಗ್ರಾಹಕರಿಗೆ ಪೂರೈಸುತ್ತಿದ್ದರು ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.