ಬಂಧನ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಡ್ರಗ್ಸ್ ಪೂರೈಕೆದಾರರ ವಿರುದ್ಧ ನಗರ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದು, ಏಪ್ರಿಲ್ ತಿಂಗಳಲ್ಲಿ 59 ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 208 ಕೆ.ಜಿ. ಗಾಂಜಾ, 22 ಗ್ರಾಂ. ಹೆರಾಯಿನ್, 1 ಕೆ.ಜಿ. ಎಂಡಿಎಂಎ, 38 ಟೈಡಲ್ ಮಾತ್ರೆಗಳನ್ನು ಜಪ್ತಿ ಮಾಡಲಾಗಿದೆ.
ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿದ್ದವರ ವಿರುದ್ಧ 188 ಪ್ರಕರಣ ದಾಖಲಿಸಿಕೊಂಡು 366 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಡಕಾಯಿತಿ, ಸುಲಿಗೆ, ಕಳ್ಳತನ ಸೇರಿ ವಿವಿಧ ಅಪರಾಧ ಕೃತ್ಯ ಎಸಗಿ ತಲೆಮರೆಸಿಕೊಂಡಿದ್ದ 12 ಮಂದಿಯನ್ನು ಬಂಧಿಸಲಾಗಿದೆ. ರೌಡಿ ಚಟುವಟಿಕೆಯಲ್ಲಿ ತೊಡಗಿದ್ದ 10 ಮಂದಿ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.