ADVERTISEMENT

ಸಿಸಿಬಿ ಪೊಲೀಸರ ವಿಶೇಷ ಕಾರ್ಯಾಚರಣೆ: ₹ 2.32 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2024, 1:00 IST
Last Updated 28 ಫೆಬ್ರುವರಿ 2024, 1:00 IST
ಆರೋಪಿಗಳಿಂದ ಜಪ್ತಿ ಮಾಡಲಾದ ಡ್ರಗ್ಸ್
ಆರೋಪಿಗಳಿಂದ ಜಪ್ತಿ ಮಾಡಲಾದ ಡ್ರಗ್ಸ್   

ಬೆಂಗಳೂರು: ಡ್ರಗ್ಸ್ ಸಾಗಣೆ ಹಾಗೂ ಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, ಮೂವರು ಪೆಡ್ಲರ್‌ಗಳನ್ನು ಬಂಧಿಸಿ ₹ 2.32 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

‘ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ನೈಜೀರಿಯಾದ ಇಮಾನ್ಯುಲ್ ಕ್ವಾಸೈ (32), ಚೈನಾಸ್ ಸೈಪ್ರಿಲನ್ ಒಕೊಯೊ (38) ಹಾಗೂ ಕಾಲು ಚುಕ್ವಾನನ್ನು (40) ಸೆರೆಹಿಡಿಯಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಪ್ರವಾಸಿ ಹಾಗೂ ವ್ಯಾಪಾರ ವೀಸಾದಡಿ ಆರೋಪಿಗಳು ನಗರಕ್ಕೆ ಬಂದಿದ್ದರು. ತಮ್ಮದೇ ದೇಶದ ಪ್ರಜೆಗಳ ಮೂಲಕ ಡ್ರಗ್ಸ್ ಖರೀದಿಸಿ, ಪರಿಚಯಸ್ಥ ಗ್ರಾಹಕರಿಗೆ ಮಾರುತ್ತಿದ್ದರು. ಆರೋಪಿಯೊಬ್ಬ ಈ ಹಿಂದೆಯೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ. ಜೈಲಿನಲ್ಲಿದ್ದ ಈತ, ಜಾಮೀನಿನ ಮೇಲೆ ಹೊರಬಂದು ಪುನಃ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ’ ಎಂದು ತಿಳಿಸಿದರು.

ADVERTISEMENT

‘730 ಗ್ರಾಂ ತೂಕದ ಎಂಡಿಎಂಎ ಮಾತ್ರೆಗಳು, 1,273 ಎಕ್ಸ್‌ಟೆಸಿ ಮಾತ್ರೆಗಳು ಹಾಗೂ 42 ಗ್ರಾಂ ಹೈಡ್ರೊ ಗಾಂಜಾ ಜಪ್ತಿ ಮಾಡಲಾಗಿದೆ. ಇವುಗಳ ಸದ್ಯದ ಮಾರುಕಟ್ಟೆ ಮೌಲ್ಯ ₹ 2.32 ಕೋಟಿ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.