ADVERTISEMENT

ದೇವನಹಳ್ಳಿ | ವಿಮಾನ ನಿಲ್ದಾಣದಲ್ಲಿ ₹23 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 22:50 IST
Last Updated 18 ಫೆಬ್ರುವರಿ 2026, 22:50 IST
ಡ್ರಗ್ಸ್ ಸಾಗಿಸಲು ಬಳಸಿದ್ದ ಬ್ಯಾಗ್‌ 
ಡ್ರಗ್ಸ್ ಸಾಗಿಸಲು ಬಳಸಿದ್ದ ಬ್ಯಾಗ್‌    

ಬೆಂಗಳೂರು: ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ ಎನ್‌ಸಿಬಿ ಅಧಿಕಾರಿಗಳು, ₹23.88 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ಬ್ರೆಜಿಲ್ ದೇಶದ ಪ್ರಜೆಯನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ದೋಹಾದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು.

ಖಚಿತ ಮಾಹಿತಿ ಆಧರಿಸಿ ಮಂಗಳವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ನಾಲ್ಕು ಕೆ.ಜಿ ಕೊಕೇನ್‌ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ನಾಲ್ಕು ಹ್ಯಾಂಡ್‌ಬ್ಯಾಗ್‌ಗಳ ತಳಭಾಗದಲ್ಲಿ ಕೊಕೇನ್‌ ಬಚ್ಚಿಡಲಾಗಿತ್ತು. ಮಾದಕ ವಸ್ತುಗಳ ಸಾಗಣೆಗೆಂದು ಹ್ಯಾಂಡ್‌ಬ್ಯಾಗ್‌ಗಳನ್ನು ವಿಶೇಷವಾಗಿ ವಿನ್ಯಾಸ ಮಾಡಲಾಗಿತ್ತು. ಅದರ ತಳಭಾಗದಲ್ಲಿ ಯಾರಿಗೂ ಪತ್ತೆ ಮಾಡದ ರೀತಿಯಲ್ಲಿ ಡ್ರಗ್ಸ್ ಬಚ್ಚಿಡಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.