ADVERTISEMENT

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ₹2.8 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 14:04 IST
Last Updated 24 ಫೆಬ್ರುವರಿ 2026, 14:04 IST
ಡ್ರಗ್ಸ್‌– ಪ್ರಾತಿನಿಧಿಕ ಚಿತ್ರ
ಡ್ರಗ್ಸ್‌– ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು, ₹2.8 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕನ ಲಗೇಜ್ ಬ್ಯಾಗ್‌ ಪರಿಶೀಲನೆ ವೇಳೆ ಸುಮಾರು 8 ಕೆ.ಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಇದರ ಅಂದಾಜು ಮೌಲ್ಯ ₹2.8 ಕೋಟಿ ಎಂದು ಮೂಲಗಳು ತಿಳಿಸಿವೆ.

ಇನ್ನೊಂದು ಪ್ರಕರಣದಲ್ಲಿ ಹಾಂಕಾಂಗ್‌ನಿಂದ ಬಂದಿದ್ದ ಪ್ರಯಾಣಿಕನ ಬಳಿ 900 ಗ್ರಾಂ ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು ₹31.5 ಲಕ್ಷವೆಂದು ಅಂದಾಜಿಸಲಾಗಿದೆ. ಗಾಂಜಾವನ್ನು ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಟ್ಟುಕೊಂಡು ಇಬ್ಬರೂ ಪ್ರಯಾಣಿಕರು ವಿದೇಶದಿಂದ ವಿಮಾನದ ಮೂಲಕ ಬಂದಿದ್ದರು ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

ಆರೋಪಿಗಳ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.‌

ಖಚಿತ ಮಾಹಿತಿ ಆಧರಿಸಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದರು ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.