ಬಂಧನ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಅಮಲು ಬರುವ ಮಾತ್ರೆಗಳನ್ನು ಮನೆಯಲ್ಲೇ ತಯಾರಿಸಿ ಮಾರಾಟ ಮಾಡುತಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸ್ ಬಂಧಿಸಿದ್ದಾರೆ.
ನಗರದ ಪ್ರೇಮ್ ಅಲಿಯಾಸ್ ವೈಷ್ಣವ್(27) ಎಂಬುವರನ್ನು ಬಂಧಿಸಿ, ಮಾತ್ರೆಗಳನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಬಿನ್ನಿಮಿಲ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಆರೋಪಿಯು, ರಾಸಾಯನಿಕ ಮಿಶ್ರಿತ ವಸ್ತುಗಳನ್ನು ಬೆರೆಸಿ ಮಾತ್ರೆಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಪೊಲೀಸರು, ಆತನನ್ನು ವಶಕ್ಕೆ ಪಡೆದು ₹40 ಲಕ್ಷ ಮೌಲ್ಯದ 6,700 ಮಾತ್ರೆಗಳನ್ನು ಜಪ್ತಿ ಮಾಡಿದ್ದಾರೆ.
ಕಾಲೇಜು ವಿದ್ಯಾರ್ಥಿಗಳಿಗೆ ಒಂದು ಮಾತ್ರೆಗೆ ₹200 ರಂತೆ ಮಾರಾಟ ಮಾಡಲಾಗುತ್ತಿತ್ತು. ಬೇಡಿಕೆ ಇದ್ದ ಸಂದರ್ಭದಲ್ಲಿ ಒಂದು ಮಾತ್ರೆಯನ್ನು ₹ 500ಕ್ಕೆ ಮಾರಾಟ ಮಾಡಲಾಗಿದೆ. ಆರೋಪಿಯು ಅತಿ ಕಡಿಮೆ ಬೆಲೆಗೆ ಮಾತ್ರೆಗಳನ್ನು ತಯಾರಿಸಿ, ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವುದು ಗೊತ್ತಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಎಂ. ಹಾಕೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.