ಬೆಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಕಡಿಮೆ ಬೆಲೆಗೆ ಡ್ರಗ್ಸ್ ತಂದು ನಗರದ ಪಿ.ಜಿಗಳಲ್ಲಿ (ಪೇಯಿಂಗ್ ಗೆಸ್ಟ್) ನೆಲಸಿರುವ ವಿದ್ಯಾರ್ಥಿಗಳು ಹಾಗೂ ಸಾಫ್ಟ್‌ವೇರ್ ಎಂಜಿನಿಯರ್‌ಗಳಿಗೆ ಪೂರೈಸುತ್ತಿದ್ದ ಇಬ್ಬರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತ್ರಿಪುರಾದ ರೂಸಾನ್ ಹಾಗೂ ನಗರದ ಕಾಸಿಫ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
‘ಆಂಧ್ರಪ್ರದೇಶದಿಂದ ಕಡಿಮೆ ಬೆಲೆಗೆ ಡ್ರಗ್ಸ್ ಅನ್ನು ತರಿಸಿಕೊಳ್ಳುತ್ತಿದ್ದರು. ಅದನ್ನು ಗೊರಗುಂಟೆಪಾಳ್ಯದ ಬಳಿ ಮಾರಾಟ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.
‘ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಇನ್‌ಸ್ಪೆಕ್ಟರ್ ಸಿ.ಎ.ಮಂಜಪ್ಪ ಅವರಿಗೆ ಬಂದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಯಿತು’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.