ಹೈಕೋರ್ಟ್ ಧಾರವಾಡ ಪೀಠ
ಬೆಂಗಳೂರು: ‘ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಸಹ ಆರೋಪಿಯ ತಪ್ಪೊಪ್ಪಿಗೆ ಆಧರಿಸಿ ಮತ್ತೊಬ್ಬ ವ್ಯಕ್ತಿಯನ್ನು ಅಪರಾಧದಲ್ಲಿ ಸಿಲುಕಿಸಲಾಗದು’ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್ ರೌಡಿಶೀಟರ್ ಜೆ.ನಾಗರಾಜ್ ಅಲಿಯಾಸ್ ವಿಲ್ಸನ್ ಗಾರ್ಡನ್ ನಾಗ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಯನ್ನು ರದ್ದುಪಡಿಸಿದೆ.
‘ನನ್ನ ವಿರುದ್ಧದ ಕ್ರಿಮಿನಲ್ ಪ್ರಕರಣ ಮತ್ತು ದೋಷಾರೋಪ ಪಟ್ಟಿ ರದ್ದುಗೊಳಿಸಬೇಕು’ ಎಂದು ಕೋರಿ ಜೆ.ನಾಗರಾಜ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ. ‘ಮಾದಕ ದ್ರವ್ಯ ನಿಗ್ರಹ ಕಾಯ್ದೆ–1985ರ (ಎನ್‌ಡಿಪಿಎಸ್) ಕಲಂ 52ಎ ಅಡಿ ಜಪ್ತಿ ಮಾಡಿದ ವಸ್ತುವನ್ನು ಆರೋಪಿಯ ಸಮ್ಮುಖದಲ್ಲಿ ಮಹಜರು ಮಾಡಬೇಕು. ಆದರೆ ಈ ಪ್ರಕರಣದಲ್ಲಿ ಜಪ್ತಿ ಮಾಡಿದ ವಸ್ತುಗಳನ್ನು ಮಹಜರು ಮಾಡಿಲ್ಲ. ಹಾಲಿ ಪ್ರಕರಣದಲ್ಲಿ ಕಲಂ 67ರ ಅಡಿ ಸಹ ಆರೋಪಿಯ ತಪ್ಪೊಪ್ಪಿಗೆ ಆಧರಿಸಿ ಅರ್ಜಿದಾರರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ’ ಎಂಬ ಅಭಿಪ್ರಾಯದೊಂದಿಗೆ ನ್ಯಾಯಪೀಠ ಜೆ.ನಾಗರಾಜ್ ಅಲಿಯಾಸ್ ವಿಲ್ಸನ್ ಗಾರ್ಡನ್ ನಾಗ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿದೆ.
ನಾಗ ಪರ ಹೈಕೋರ್ಟ್‌ವಕೀಲರಾದ ಮಧುಕರ ದೇಶಪಾಂಡೆ ಮತ್ತು ಎನ್.ಗೌರವ್ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.