ADVERTISEMENT

₹6 ಕೋಟಿ ಮಾದಕ ವಸ್ತು ಜಪ್ತಿ: ಬಂಧನ

ಮಾದಕ ವಸ್ತು ಸಾಗಣೆ ಮಾಡುತ್ತಿದ್ದ ಪ್ರಯಾಣಿಕರಿಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2019, 18:55 IST
Last Updated 23 ಮಾರ್ಚ್ 2019, 18:55 IST
ಬಂಧಿತರಿಂದ ವಶಪಡಿಸಿಕೊಂಡ ಮಾದಕ ವಸ್ತು
ಬಂಧಿತರಿಂದ ವಶಪಡಿಸಿಕೊಂಡ ಮಾದಕ ವಸ್ತು   

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮಾದಕ ವಸ್ತು ಸಾಗಣೆ ಮಾಡುತ್ತಿದ್ದ ಪ್ರಯಾಣಿಕರಿಬ್ಬರನ್ನುಬಂಧಿಸಿರುವಮಾದಕ ವಸ್ತು ಕಳ್ಳಸಾಗಣೆ ನಿಯಂತ್ರಣ ದಳದ (ಎನ್‌ಸಿಬಿ) ಅಧಿಕಾರಿಗಳು, ಸುಮಾರು ₹6 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

‘ಕೊಡಗು ಜಿಲ್ಲೆ ವಿರಾಜಪೇಟೆಯ ನೌಶೀರ್ ಮೊಹಮ್ಮದ್ (29) ಹಾಗೂ ಕೇರಳದ ಎಂ. ನೌಶಾದ್ (24) ಬಂಧಿತರು. ಮಾದಕ ವಸ್ತುವನ್ನು ಅವರು ಎಲ್ಲಿಂದ ತಂದಿದ್ದರು ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಎನ್‌ಸಿಬಿ ಅಧಿಕಾರಿಯೊಬ್ಬರು ತಿಳಿಸಿದರು.

‘ಆರೋಪಿಗಳು ಓಮನ್ ಏರ್‌ವೇಸ್ ವಿಮಾನದಲ್ಲಿ ಕತಾರ್‌ಗೆ ಹೋಗಲು ನಿಲ್ದಾಣಕ್ಕೆ ಬಂದಿದ್ದರು. ಡ್ರಗ್ಸ್ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಬರುತ್ತಿದ್ದಂತೆ ನಿಲ್ದಾಣಕ್ಕೆ ಹೋಗಿ ಅವರಿಬ್ಬರನ್ನು ತಪಾಸಣೆಗೆ ಒಳಪಡಿಸಲಾಯಿತು. ಆರೋಪಿಗಳ ಬಳಿ ಇದ್ದ ಬ್ಯಾಗ್‌ನಲ್ಲಿ ಎರಡು ತಿಂಡಿ ಬಾಕ್ಸ್‌ಗಳು ಸಿಕ್ಕವು. ಅದರೊಳಗೆ ಡ್ರಗ್ಸ್ ಇತ್ತು.’

ADVERTISEMENT

‘965 ಗ್ರಾಂ ಅಂಫೆಥಮೈನ್, 30 ಗ್ರಾಂ ಕೊಕೇನ್ ಹಾಗೂ 4.52 ಕೆ.ಜಿ ಹ್ಯಾಶಿಷ್ ಜಪ್ತಿ ಮಾಡಲಾಗಿದೆ’ ಎಂದು ಅಧಿಕಾರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.