ಬೆಂಗಳೂರು: ಡ್ರಗ್ಸ್ ಮಾರಾಟ ಆರೋಪದಡಿ ವಶಕ್ಕೆ ಪಡೆಯಲಾಗಿದ್ದ ಆಫ್ರಿಕಾ ಪ್ರಜೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.
ಜೆ.ಸಿ.ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆಫ್ರಿಕಾ ಪ್ರಜೆಯನ್ನು ವಶಕ್ಕೆ ಪಡೆದಿದ್ದರು. ಅವರ ಬಳಿ 5 ಗ್ರಾಂ ಎಂಡಿಎಂಎ ಪತ್ತೆಯಾಗಿತ್ತು ಎನ್ನಲಾಗಿದೆ.
ಆರೋಪಿಯನ್ನು ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸುತ್ತಿದ್ದರು. ಅದೇ ವೇಳೆಯೇ ಆಫ್ರಿಕಾ ಪ್ರಜೆಗೆ ಎದೆನೋವು ಕಾಣಿಸಿಕೊಂಡಿತ್ತು. ಪೊಲೀಸರು ಅವರನ್ನು ಚಿರಾಯು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ಗೊತ್ತಾಗಿದೆ. ಈ ಸಾವಿನ ಬಗ್ಗೆ ಸಿಐಡಿ ಪೊಲೀಸರು, ತನಿಖೆ ಆರಂಭಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರಕುಮಾರ್ ಮೀನಾ, 'ಆರೋಪಿಗೆ ಶೀತ ಆಗಿತ್ತು. ಎದೆ ನೋವು ಇರುವುದಾಗಿ ಆರೋಪಿ ಹೇಳಿದ್ದಕ್ಕೆ ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿಯೇ ಅವರು ತೀರಿಕೊಂಡಿದ್ದಾರೆ' ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.