ADVERTISEMENT

ಡ್ರಗ್ಸ್ ಪ್ರಕರಣ: ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರ ಪುತ್ರ ಸೇರಿ ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2020, 10:13 IST
Last Updated 9 ನವೆಂಬರ್ 2020, 10:13 IST
ರುದ್ರಪ್ಪ ಲಮಾಣಿ ಅವರ ಪುತ್ರ ದರ್ಶನ
ರುದ್ರಪ್ಪ ಲಮಾಣಿ ಅವರ ಪುತ್ರ ದರ್ಶನ   

ಬೆಂಗಳೂರು:ಡ್ರಗ್ಸ್ ಪ್ರಕರಣ ಸಂಬಂಧ ಮಾಜಿ ಸಚಿವ ಹಾವೇರಿಯ ರುದ್ರಪ್ಪ ಲಮಾಣಿ ಅವರ ಪುತ್ರ ದರ್ಶನ ಸೇರಿ ಮೂವರನ್ನು ಸಿಸಿಬಿ ಪೊಲೀಸರು, ಗೋವಾದಲ್ಲಿ ಬಂಧಿಸಿದ್ದಾರೆ‌.

ಡಾರ್ಕ್ ನೆಟ್ ಮೂಲಕ ಡ್ರಗ್ಸ್ ಖರೀದಿಸಿ ಮಾರಾಟ ಮಾಡುತ್ತಿದ್ದ ಆರೋಪದಡಿ ಇತ್ತೀಚೆಗಷ್ಟೇ ಸುಜಯ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. 500 ಗ್ರಾಂ ಹೈಡ್ರೊ ಗಾಂಜಾ ಜಪ್ತಿ ಮಾಡಿದ್ದರು.

ಈ ಡ್ರಗ್ಸ್ ಜಾಲದಲ್ಲಿದ್ದ ಹೇಮಂತ್ ಹಾಗೂ ಸುನೇಶ್ ಎಂಬುವರು ತಲೆಮರೆಸಿಕೊಂಡಿದ್ದರು. ಅವರಿಬ್ಬರ ಬಂಧನಕ್ಕಾಗಿ ಸಿಸಿಬಿ ಪೊಲೀಸರ ತಂಡ ಗೋವಾಕ್ಕೆ ಹೋಗಿತ್ತು‌. ಅಲ್ಲಿಯೇ ಅವರಿಬ್ಬರನ್ನು ಬಂಧಿಸಲಾಗಿದೆ‌.

ADVERTISEMENT

ಡ್ರಗ್ಸ್ ಪ್ರಕರಣದ ಆರೋಪಿಗಳಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿ, ಅವರಿಗೆ ಸಹಕಾರ ನೀಡಿದ್ದ ಆರೋಪದಡಿ ದರ್ಶನ್ ಲಮಾಣಿ ಅವರನ್ನೂ ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.

'ಮೂವರನ್ನೂ ಸಿಸಿಬಿ ಕಸ್ಟಡಿಗೆಪಡೆಯಲಾಗಿದೆ. ಅವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ದರ್ಶನ್ ಭಾಗಿ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ' ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.