ADVERTISEMENT

ಬೆಂಗಳೂರು: ವಿದೇಶಿ ಡ್ರಗ್ಸ್ ಪೆಡ್ಲರ್‌ ಬಂಧನ, ₹1.75 ಲಕ್ಷ ಮೌಲ್ಯದ ಕೊಕೇನ್ ಜಪ್ತಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2024, 15:06 IST
Last Updated 16 ಏಪ್ರಿಲ್ 2024, 15:06 IST
ಅಮಾಡೊ ಸಿಡ್ಬೆ ಬೌಬಾಕಾರ್
ಅಮಾಡೊ ಸಿಡ್ಬೆ ಬೌಬಾಕಾರ್   

ಬೆಂಗಳೂರು: ಚನ್ನಮ್ಮನ ಅಚ್ಚುಕಟ್ಟು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರುತ್ತಿದ್ದ ಆರೋಪದಡಿ ವಿದೇಶಿ ಪ್ರಜೆ ಅಮಾಡೊ ಸಿಡ್ಬೆ ಬೌಬಾಕರ್‌ (27) ಎಂಬಾತನನ್ನು ಬಂಧಿಸಿದ್ದಾರೆ.

‘ಆರೋಪಿ ಅಮಾಡೊ ಸಿಡ್ಬೆಯಿಂದ ₹1.75 ಲಕ್ಷ ಮೌಲ್ಯದ 24 ಗ್ರಾಂ ಮಾದಕ ವಸ್ತು ಕೊಕೇನ್‌ ಹಾಗೂ ₹1 ಸಾವಿರ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಪೆಡ್ಲರ್‌ ಕಡೆಯಿಂದ ಮಾದಕ ವಸ್ತು ಖರೀದಿಸುತ್ತಿದ್ದ ಆರೋಪಿ, ಅದನ್ನು ಮಾರಾಟ ಮಾಡಿ ಹಣ ಗಳಿಸುತ್ತಿದ್ದ. ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಖಾಸಗಿ ಕಂಪನಿ ಉದ್ಯೋಗಿಗಳು ಆರೋಪಿ ಬಳಿ ಡ್ರಗ್ಸ್ ಖರೀದಿಸುತ್ತಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಆರೋಪಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮಾಹಿತಿ ಸಿಕ್ಕಿತ್ತು. ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.