ADVERTISEMENT

ಹಶೀಷ್ ಮಾರುತ್ತಿದ್ದವರಿಗೆ 10 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 4 ಜೂನ್ 2022, 15:59 IST
Last Updated 4 ಜೂನ್ 2022, 15:59 IST
   

ಬೆಂಗಳೂರು: ಹಶೀಷ್ ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಅಪರಾಧಿಗಳಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ನಗರದ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಕೇರಳದ ಜಾನ್ಸನ್ ಜೋಸೆಫ್ (31) ಹಾಗೂ ಬಿಜು ಅಬ್ರಾಹಂ (38) ಶಿಕ್ಷೆಗೆ ಗುರಿಯಾದವರು. ಇವರ ವಿರುದ್ಧ ಸುದ್ದಗುಂಟೆಪಾಳ್ಯ ಠಾಣೆಯಲ್ಲಿ 2017ರ ಜುಲೈ 7ರಂದು ಪ್ರಕರಣ ದಾಖಲಾಗಿತ್ತು.

‘ತಾವರಕೆರೆ ಮುಖ್ಯರಸ್ತೆಯಲ್ಲಿ ಸುತ್ತಾಡುತ್ತಿದ್ದ ಆರೋಪಿಗಳು, ಪರಿಚಿತ ಗ್ರಾಹಕರಿಗೆ ಹಶೀಷ್ ಮಾರುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೊಲೀಸರ ತಂಡ, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿತ್ತು. 6 ಕೆ.ಜಿ 377 ಗ್ರಾಂ ಹಶೀಷ್ ಜಪ್ತಿ ಮಾಡಿತ್ತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ADVERTISEMENT

‘ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಬಶೀರ್ ಅಹ್ಮದ್ ಮಕಾಂದರ್ ವಾದಿಸಿದ್ದರು’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.