ADVERTISEMENT

ಗಾಂಜಾ ಮಾರಾಟ: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2021, 19:45 IST
Last Updated 23 ಡಿಸೆಂಬರ್ 2021, 19:45 IST

ಬೆಂಗಳೂರು: ತೋಟದಲ್ಲಿ ಗಾಂಜಾ ತಂದಿಟ್ಟುಕೊಂಡು ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ ಮುಬಾರಕ್‌, ಅಫ್ರೊಜ್‌ ಹಾಗೂ ಇಮ್ರಾನ್ ಎಂಬುವರನ್ನು ಎಚ್‌ಎಎಲ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 9 ಕೆ.ಜಿ.ಗಾಂಜಾ, ಕೃತ್ಯಕ್ಕೆ ಬಳಸಿದ್ದ ಬೈಕ್‌ ಹಾಗೂ ಮಾಪನಯಂತ್ರ ಜಪ್ತಿ ಮಾಡಲಾಗಿದೆ.

‘ಆರೋಪಿಗಳು ವಿಭೂತಿಪುರ ಬಳಿಯ ತೋಟದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಇದರ ಆಧಾರದಲ್ಲಿ ದಾಳಿ ನಡೆಸಿ ಮೂವರನ್ನು ಬಂಧಿಸಲಾಗಿದ್ದು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT