ADVERTISEMENT

ಬೆಂಗಳೂರಲ್ಲಿ ಡ್ರಗ್ಸ್ ಮಾರಾಟ: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2025, 14:29 IST
Last Updated 4 ಅಕ್ಟೋಬರ್ 2025, 14:29 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಸಿದ್ದಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಲಾಲ್‌ಬಾಗ್‌ನ ದಕ್ಷಿಣ ಗೇಟ್‌ನಿಂದ ಅಶೋಕ ಪಿಲ್ಲರ್‌ಗೆ ತೆರಳುವ ರಸ್ತೆಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಮಂಗಳೂರಿನ ಮೊಹಮ್ಮದ್‌ ಶಂಷೀರ್‌, ಜಾಬೀರ್, ಅಭಿಷೇಕ್‌ ಬಂಧಿತರು.

ಬಾತ್ಮೀದಾರರು ನೀಡಿದ ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು. ಹೊರರಾಜ್ಯದಿಂದ ಡ್ರಗ್ಸ್ ಅನ್ನು ಕಡಿಮೆ ಬೆಲೆಗೆ ಖರೀದಿಸಿ, ನಗರದಲ್ಲಿರುವ ಗ್ರಾಹಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಮಾರಾಟದಿಂದ ಬಂದ ಹಣದಲ್ಲಿ ಮೋಜು– ಮಸ್ತಿ ಮಾಡುತ್ತಿದ್ದರು. ಮಾರಾಟಕ್ಕೆ ಇಟ್ಟುಕೊಂಡಿದ್ದ ಡ್ರಗ್ಸ್ ಅನ್ನು ಬಂಧಿತರಿಂದ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.