ADVERTISEMENT

ಸಿನಿ ತಾರೆಯರಿಗೆ ಡ್ರಗ್ ಪೂರೈಸುತ್ತಿದ್ದ ಆಫ್ರಿಕಾ ಪ್ರಜೆ ಬಂಧನ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 8:59 IST
Last Updated 5 ಸೆಪ್ಟೆಂಬರ್ 2020, 8:59 IST
ಲೌಮ್ ಪೆಪ್ಪೆರ್
ಲೌಮ್ ಪೆಪ್ಪೆರ್    

ಬೆಂಗಳೂರು:ಡ್ರಗ್ ಜಾಲದ ತನಿಖೆ ಮುಂದುವರಿಸಿರುವ ಸಿಸಿಬಿ ಪೊಲೀಸರು, ಕೆಲ ಸಿನಿ ತಾರೆಯರಿಗೆ ಹಾಗೂ ಇತರರಿಗೆ ಡ್ರಗ್ ಪೂರೈಸುತ್ತಿದ್ದ ಆರೋಪದಡಿ ಆಫ್ರಿಕಾದ ಲೌಮ್ ಪೆಪ್ಪೆರ್ ಸಾಂಬಾ ಎಂಬಾತನನ್ನು ಶನಿವಾರ ಬಂಧಿಸಿದ್ದಾರೆ.

ಡ್ರಗ್ ಜಾಲದಲ್ಲಿ ಭಾಗಿಯಾಗಿದ್ದ ಆರೋಪದಡಿ ನಟಿ ರಾಗಿಣಿ, ಅವರ ಸ್ನೇಹಿತ ರವಿ ಶಂಕರ್ ಸೇರಿದಂತೆ ನಾಲ್ವರನ್ನು ಈಗಾಗಲೇ ಬಂಧಿಸಲಾಗಿದೆ.

ಬಂಧಿತ ಆರೋಪಿಗಳು, ಡ್ರಗ್ ಪೂರೈಕೆ ಮಾಡುತ್ತಿದ್ದ ಬಗ್ಗೆ ಬಾಯ್ಬಿಟ್ಟಿದ್ದಾರೆ. ಅದರ ಆಧಾರದಲ್ಲೇ ಹಲವರ ಬಂಧನಕ್ಕೆ ಸಿಸಿಬಿ ಬಲೆ ಬೀಸಿದೆ.

‘ಆಫ್ರಿಕಾ ಪ್ರಜೆ ಲೌಮ್‌ನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ರವಿ ಶಂಕರ್ ಹಾಗೂ ಕೆಲ ಸಿನಿ ತಾರೆಯರಿಗೆ ಆತ ಡ್ರಗ್ ಸರಬರಾಜು ಮಾಡುತ್ತಿದ್ದ ಮಾಹಿತಿ ಸಿಕ್ಕಿದೆ’ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.