ADVERTISEMENT

ಡ್ರಗ್ಸ್ ಜಾಲ: ಮಂಗಳೂರಿನ ಪ್ರತೀಕ್ ಶೆಟ್ಟಿ ಸೇರಿ ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 12:32 IST
Last Updated 11 ಸೆಪ್ಟೆಂಬರ್ 2020, 12:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಭಾಗಿಯಾದ ಆರೋಪದಡಿ ಮಂಗಳೂರಿನ ಪ್ರತೀಕ್ ಶೆಟ್ಟಿ ಹಾಗೂ ಹರಿಯಾಣದ ಆದಿತ್ಯ ಅಗರವಾಲ್ ಎಂಬುವರನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಆದಿತ್ಯ ಅಗರವಾಲ್

‘ಆರೋಪಿ ಪ್ರತೀಕ್ ಶೆಟ್ಟಿ, ನಟಿಯರು ಹಾಗೂ ಇತರೆ ಆರೋಪಿಗಳ ಜೊತೆ ಒಡನಾಟವಿಟ್ಟುಕೊಂಡಿದ್ದ. ಡ್ರಗ್ಸ್ ಪೆಡ್ಲರ್ ಜೊತೆಯಲ್ಲೂ ಗುರುತಿಸಿಕೊಂಡಿದ್ದ. ಇನ್ನೊಬ್ಬ ಆರೋಪಿ ಆದಿತ್ಯ, ಈಗಾಗಲೇ ಬಂಧಿಸಿರುವ ದೆಹಲಿಯ ವಿರೇನ್ ಖನ್ನಾನ ಸಹಚರ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ನಗರದಲ್ಲಿ ಕೆಲಸ ಮಾಡುತ್ತಿದ್ದ ಆದಿತ್ಯ, ಡ್ರಗ್ಸ್ ಪೆಡ್ಲರ್ ಜೊತೆಯಲ್ಲಿ ಒಡನಾಟವಿಟ್ಟುಕೊಂಡಿದ್ದ. ನ್ಯಾಯಾಲಯದ ಅನುಮತಿ ಪಡೆದು ಆತನ ಮನೆ ಮೇಲೂ ದಾಳಿ ಮಾಡಲಾಯಿತು. ಇಬ್ಬರನ್ನು ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗಿದೆ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.