ಪ್ರಾಧಿನಿಧಿಕ ಚಿತ್ರ
ಐಸ್ಟಾಕ್ ಚಿತ್ರ
ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದ ನೈಜಿರಿಯಾ ಪ್ರಜೆಗೆ 15 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಸಿಸಿಎಚ್ 33ನೇ ನ್ಯಾಯಾಲಯ (ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ) ಆದೇಶಿಸಿದೆ.
ಹಾರ್ಲಿ ಒಕನೊವ ಶಿಕ್ಷೆಗೆ ಗುರಿಯಾದ ಅಪರಾಧಿ. ಕೆ.ಆರ್.ಪುರದ ಚಂದ್ರವದನಾ ಲೇಔಟ್‌ನ ಕಲ್ಕೆರೆ ಮುಖ್ಯ
ರಸ್ತೆಯಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡಲು ಪ್ರಯತ್ನಿಸು ತ್ತಿದ್ದ ವೇಳೆ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿ, 200 ಗ್ರಾಂ ಎಂಡಿಎಂಎ ಕ್ರಿಸ್ಟೆಲ್ ವಶಪಡಿಸಿಕೊಂಡಿದ್ದರು.
ಪೊಲೀಸರು ತನಿಖೆ ನಡೆಸಿ, ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ವಿವಿಧ ಕಲಂನ ವಿದೇಶಿ ಕಾಯ್ದೆ ಅಡಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಆರೋಪ ಸಾಬೀತಾದ ಕಾರಣ 15 ವರ್ಷ ಜೈಲು ಹಾಗೂ ₹1.75 ಲಕ್ಷ ದಂಡ ವಿಧಿಸಿ ನ್ಯಾಯಾಧೀಶ ವಿಜಯ ದೇವರಾಜ ಅರಸು ಆದೇಶಿಸಿದ್ದಾರೆ. ಅಭಿಯೋಜಕ ಕೆ.ವಿ.ಅಶ್ವಥ್‌ನಾರಾಯಣ ವಾದ ಮಂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.