ADVERTISEMENT

ಡ್ರಗ್ಸ್; ನೈಜೀರಿಯಾ ಪ್ರಜೆಗಳ ಬಂಧನ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 15:28 IST
Last Updated 23 ಫೆಬ್ರುವರಿ 2021, 15:28 IST
ಜಪ್ತಿ ಮಾಡಲಾದ ಡ್ರಗ್ಸ್ ಮಾತ್ರೆಗಳು
ಜಪ್ತಿ ಮಾಡಲಾದ ಡ್ರಗ್ಸ್ ಮಾತ್ರೆಗಳು   

ಬೆಂಗಳೂರು: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಡಿ ನೈಜೀರಿಯಾ ಪ್ರಜೆಗಳಿಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಚುಕು ಎಮೇಕಾ ಹಾಗೂ ಅಮ್ಸೆಲಮ್ ಚಿಗೋಜೆ ಬಂಧಿತರು. ಅವರಿಂದ 56 ಡ್ರಗ್ಸ್ ಮಾತ್ರೆಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

‘ಹೊರ ರಾಜ್ಯಗಳ ಪೆಡ್ಲರ್‌ ಜೊತೆ ಸಂಪರ್ಕವಿಟ್ಟುಕೊಂಡಿದ್ದ ಆರೋಪಿಗಳು, ಅವರಿಂದ ಡ್ರಗ್ಸ್ ಖರೀದಿಸಿ ನಗರಕ್ಕೆ ತಂದು ಮಾರುತ್ತಿದ್ದರು. ಕೆಲ ಕಾಲೇಜು ವಿದ್ಯಾರ್ಥಿಗಳು, ಕೆಲ ಖಾಸಗಿ ಕಂಪನಿ ಉದ್ಯೋಗಿಗಳು ಹಾಗೂ ಕೆಲ ಉದ್ಯಮಿಗಳಿಗೆ ಆರೋಪಿಗಳು ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಮಾಹಿತಿ ಇದೆ’ ಎಂದೂ ಮೂಲಗಳು ಹೇಳಿವೆ.

ADVERTISEMENT

‘ಆರೋಪಿಗಳ ಜೊತೆ ಮತ್ತಷ್ಟು ಮಂದಿ ಕೃತ್ಯದಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ. ಡ್ರಗ್ಸ್ ಖರೀದಿ ಮಾಡುತ್ತಿದ್ದವರ ಬಗ್ಗೆಯೂ ಮಾಹಿತಿ ಪಡೆಯಲಾಗುತ್ತಿದ್ದು, ಅಗತ್ಯವಿದ್ದರೆ ಅವರನ್ನು ವಿಚಾರಣೆ ನಡೆಸಲಾಗುವುದು’ ಎಂದೂ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.