ADVERTISEMENT

₹ 4.40 ಲಕ್ಷ ಮೌಲ್ಯ ಡ್ರಗ್ಸ್ ಜಪ್ತಿ

​ಪ್ರಜಾವಾಣಿ ವಾರ್ತೆ
Published 23 ಮೇ 2022, 2:52 IST
Last Updated 23 ಮೇ 2022, 2:52 IST

ಬೆಂಗಳೂರು: ಈಶಾನ್ಯ ವಿಭಾಗದ ಪೊಲೀಸರುಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ತಿರುಮೇನಹಳ್ಳಿ ಬಳಿ ಡ್ರಗ್ಸ್ ಮಾರುತ್ತಿದ್ದ ನೈಜೀರಿಯಾ ಪ್ರಜೆ ಜೆರ್ರಿ (35) ಎಂಬಾತನನ್ನು ಬಂಧಿಸಿದ್ದು, ಆತನಿಂದ ₹ 4.40 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

‘₹ 4 ಲಕ್ಷ ಮೌಲ್ಯದ 80 ಗ್ರಾಂ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಲಾಗಿದೆ.ವೀಸಾ ಅವಧಿ ಮುಗಿದರೂ ಬಾಡಿಗೆ ಮನೆಯಲ್ಲಿ ಅಕ್ರಮವಾಗಿ ನೆಲೆಸಿದ್ದ. ಹೊರ ರಾಜ್ಯಗಳಿಂದ ಡ್ರಗ್ಸ್ ತರಿಸಿ ಮನೆಯಲ್ಲೇ ಸಂಗ್ರಹಿಸಿಟ್ಟುಕೊಳ್ಳುತ್ತಿದ್ದ’ ಎಂದು ಡಿಸಿಪಿ ಅನೂಪ್ ಶೆಟ್ಟಿ ತಿಳಿಸಿದರು.

‘ಶಾಲಾ–ಕಾಲೇಜು ವಿದ್ಯಾರ್ಥಿಗಳು ಹಾಗೂ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರುತ್ತಿದ್ದ. ಮನೆ ಮೇಲೂ ದಾಳಿ ನಡೆಸಿ, ಮೊಬೈಲ್, ತೂಕದ ಯಂತ್ರ ಹಾಗೂ ಕಾರು ಜಪ್ತಿ ಮಾಡಲಾಗಿದೆ’ ಎಂದೂ ಹೇಳಿದರು.

ADVERTISEMENT

ಯಲಹಂಕದಲ್ಲಿ ಕಾರ್ಯಾಚರಣೆ: ‘ಯಲಹಂಕ ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರುತ್ತಿದ್ದ ಆರೋಪಿ ರುವಾಂಡ ದೇಶದ ನ್ಹೂಸೆ ಇವ್ರಾ ಜಾರ್ಜ್ (34) ಹಾಗೂ ಶಿವಾಜಿನಗರದ ಮೊಹಮ್ಮದ್ ಫಾರೂಕ್ ಅಲಿಯಾಸ್ ಅಬ್ದುಲ್‌ನನ್ನು (29) ಬಂಧಿಸಲಾಗಿದೆ’ ಎಂದು ಡಿಸಿಪಿ ತಿಳಿಸಿದರು.

‘ಇವರಿಂದ ₹ 40 ಸಾವಿರ ಮೌಲ್ಯದ 8 ಗ್ರಾಂ ಎಂಡಿಎಂಎ, ₹ 25 ಸಾವಿರ ಹಾಗೂ 4 ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.