ADVERTISEMENT

ಬೆಂಗಳೂರು ಕೆಲ ಕಾಲೇಜುಗಳಿಗೆ ಡ್ರಗ್ಸ್: ಪ್ಯಾರಾಮೆಡಿಕಲ್ ವಿದ್ಯಾರ್ಥಿ ಬಂಧನ

ಗ್ಸ್ ಮಾರುತ್ತಿದ್ದ ಆರೋಪಿ ಬೆನಸ್ಟಿನ್ ರಾಯ್‌ನನ್ನು (22) ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 17 ಜುಲೈ 2023, 23:15 IST
Last Updated 17 ಜುಲೈ 2023, 23:15 IST
ಬಂಧನ (ಸಾಂದರ್ಭಿಕ ಚಿತ್ರ)
ಬಂಧನ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ನಗರದಲ್ಲಿ ಕೆಲ ಕಾಲೇಜುಗಳ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ ಆರೋಪಿ ಬೆನಸ್ಟಿನ್ ರಾಯ್‌ನನ್ನು (22) ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಕೇರಳದ ಬೆನಸ್ಟಿನ್ ರಾಯ್, ಕೆಂಗೇರಿ ಬಳಿಯ ಪ್ಯಾರಾಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿ. ಡ್ರಗ್ಸ್ ವ್ಯಸನಿಯಾಗಿದ್ದ ಈತ, ಕ್ರಮೇಣ ಪೆಡ್ಲರ್ ಆಗಿ ಮಾರ್ಪಟ್ಟಿದ್ದ. ನಗರದ ಹಲವು ಕಾಲೇಜುಗಳ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಿ ಹಣ ಸಂಪಾದಿಸುತ್ತಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಡ್ರಗ್ಸ್ ಮಾರಾಟದ ಬಗ್ಗೆ ಮಾಹಿತಿ ಬರುತ್ತಿದ್ದ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ₹ 20 ಲಕ್ಷ ಮೌಲ್ಯದ 200 ಗ್ರಾಂ ಎಂಡಿಎಂಎ, ದ್ವಿಚಕ್ರ ವಾಹನ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದ’ ಎಂದು ತಿಳಿಸಿವೆ.

ADVERTISEMENT

ಕೇರಳದಿಂದ ಡ್ರಗ್ಸ್ ತರಿಸುತ್ತಿದ್ದ: ‘ಎರಡು ವರ್ಷಗಳ ಹಿಂದೆ ವಿದ್ಯಾಭ್ಯಾಸಕ್ಕೆಂದು ಬೆನಸ್ಟಿನ್ ರಾಯ್ ನಗರಕ್ಕೆ ಬಂದಿದ್ದ. ಕೆಲ ಸ್ನೇಹಿತರ ಜೊತೆ ಸೇರಿ, ಡ್ರಗ್ಸ್ ವ್ಯಸನಿಯಾಗಿದ್ದ. ಕೇರಳದಲ್ಲಿ ಡ್ರಗ್ಸ್ ಮಾರುತ್ತಿದ್ದವರ ಜೊತೆ ಒಡನಾಟ ಬೆಳೆಸಿಕೊಂಡಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಕೇರಳದಿಂದ ಡ್ರಗ್ಸ್ ತರಿಸುತ್ತಿದ್ದ ಆರೋಪಿ, ಅದನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮಾರುತ್ತಿದ್ದ. ಕೆಲ ಕಂಪನಿ ಉದ್ಯೋಗಿಗಳಿಗೂ ಡ್ರಗ್ಸ್ ಮಾರುತ್ತಿದ್ದ ಮಾಹಿತಿ ಇದೆ. ಆರೋಪಿ ಜೊತೆ ಮತ್ತಷ್ಟು ಮಂದಿ ಕೃತ್ಯದಲ್ಲಿ ಭಾಗಿಯಾಗಿರುವ ಅನುಮಾನವಿದ್ದು, ತನಿಖೆ ಮುಂದುವರಿಸಲಾಗಿದೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.