ಬೆಂಗಳೂರು: ದೇವನಹಳ್ಳಿ, ವೈಟ್‌ಫೀಲ್ಡ್ ಹಾಗೂ ಕೋಣನಕುಂಟೆ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ, ₹50 ಲಕ್ಷ ಮೌಲ್ಯದ ವಿವಿಧ ಮಾದರಿಯ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಹೊರ ರಾಜ್ಯದ ಇಬ್ಬರು ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ.
ಕೋಣನಕುಂಟೆ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿ 1 ಕೆ.ಜಿ. 122 ಗ್ರಾಂ ಗಾಂಜಾ, 3 ಕೆ.ಜಿ. 44 ಗ್ರಾಂ ಹಶಿಷ್ ಆಯಿಲ್, ಒಂದು ಕಾರನ್ನು ಜಪ್ತಿ ಮಾಡಿದ್ದಾರೆ. ಇವುಗಳ ಮೌಲ್ಯ ₹46.10 ಲಕ್ಷ ಎಂದು ಅಂದಾಜಿಸಲಾಗಿದೆ.
ಕಾರಿನಲ್ಲಿ ಡ್ರಗ್ಸ್ ತಂದು ದೊಡ್ಡಕಲ್ಲಸಂದ್ರದ ನಾರಾಯಣನಗರದ ಜೋಡಿರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಇನ್ನು ದೇವನಹಳ್ಳಿ ಠಾಣೆಯ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ. 3 ಕೆ.ಜಿ. ಗಾಂಜಾ, ಒಂದು ದ್ವಿಚಕ್ರ ವಾಹನ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿದ್ದಾರೆ.
ವೈಟ್‌ಫೀಲ್ಡ್ ಠಾಣೆಯ ಪೊಲೀಸರು, ಹೊರ ರಾಜ್ಯದ ಇಬ್ಬರನ್ನು ಬಂಧಿಸಿ 12 ಕೆ.ಜಿ. ಗಾಂಜಾ ಹಾಗೂ ಒಂದು ಕಾರನ್ನು ಜಪ್ತಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.