ADVERTISEMENT

ಬೆಂಗಳೂರು ಪೊಲೀಸರ ಕಾರ್ಯಾಚರಣೆ: ₹3 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

​ಪ್ರಜಾವಾಣಿ ವಾರ್ತೆ
Published 29 ಜನವರಿ 2022, 9:45 IST
Last Updated 29 ಜನವರಿ 2022, 9:45 IST
ಜಪ್ತಿ ಮಾಡಲಾದ ಡ್ರಗ್ಸ್
ಜಪ್ತಿ ಮಾಡಲಾದ ಡ್ರಗ್ಸ್   

ಬೆಂಗಳೂರು: ಮಾದಕ ವಸ್ತು (ಡ್ರಗ್ಸ್) ಸಾಗಣೆ ಹಾಗೂ ಮಾರಾಟದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ನಗದ ಪೊಲೀಸರು, ₹3 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ವಿದೇಶ ಹಾಗೂ ಹೊರ ರಾಜ್ಯದಿಂದ ಡ್ರಗ್ಸ್ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಸಿಕ್ಸುಟಸ್ ಯುಚೆಕ್ (30) ಹಾಗೂ ಚುಕ್ವುಡಬೆನ್ ಹೆನ್ರಿ (34) ಬಂಧಿತರು. ಅವರಿಂದ ₹ 3 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ‘ ಎಂದು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ ತಿಳಿಸಿದರು.

ADVERTISEMENT

‘ನಗರದಲ್ಲಿರುವ ಕೆಲ ಉದ್ಯಮಿಗಳು, ಕೆಲ ತಾರೆಯರು, ಕೆಲ ಕಾಲೇಜು ವಿದ್ಯಾರ್ಥಿಗಳಿಗೆ ಆರೋಪಿಗಳು ಡ್ರಗ್ಸ್ ಮಾರುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಡ್ರಗ್ಸ್ ಜಾಲ ಭೇದಿಸಿದ ಪೊಲೀಸರ ತಂಡಕ್ಕೆ ಕಮಿಷನರ್ ಅವರು ₹70,000 ಬಹುಮಾನ ಘೋಷಿಸಿದ್ದಾರೆ‘ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.