ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳಿಗೆ ಬೆಂಬಲ ನೀಡುವುದಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಾತಿವಾದಿ ಮತ್ತು ಕೋಮುವಾದಿ ಬಿಜೆಪಿ ಪಕ್ಷದ ವಿರುದ್ಧದ ಕಾಂಗ್ರೆಸ್–ಜೆಡಿಎಸ್ ಮೈತ್ರಿಯನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದರು. ರಾಜ್ಯದ ದಲಿತರು, ರೈತರು, ಆದಿವಾಸಿಗಳು, ಕಾರ್ಮಿಕರು, ಅಲ್ಪಸಂಖ್ಯಾತರು ಮೈತ್ರಿಕೂಟದ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು.
ಬೆಂಗಳೂರು ವಿಭಾಗೀಯ ಸಂಚಾಲಕ ಜೀವನಹಳ್ಳಿ ಆರ್.ವೆಂಕಟೇಶ್, ಜಿಲ್ಲಾ ಸಂಚಾಲಕಿ ಸವಿತ, ಖಚಾಂಚಿ ರಾಮಚಂದ್ರ ನಾಗಸಂದ್ರ, ಜಿಲ್ಲಾ ಸಮಿತಿ ಸದಸ್ಯ ಹನುಮಂತರಾಜು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.