ಬೆಂಗಳೂರು: ತಾನು ಪೊಲೀಸ್ ಸಿಬ್ಬಂದಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪಿ ಲಕ್ಷ್ಮಿನಾರಾಯಣ (60) ಎಂಬಾತನನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಆರೋಪಿಯು ವ್ಯಾಪಾರಿಗಳನ್ನು ಬೆದರಿಸಿ ಅವರಿಂದ ಹಣ ವಸೂಲಿ ಮಾಡುತ್ತಿದ್ದ. ತಾನು ಪೊಲೀಸ್ ಎಂದು ಹೇಳಿಕೊಂಡು ಓಡಾಡುತ್ತಿದ್ದ. ಅನುಮಾನಗೊಂಡ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿ ಆತನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.