ADVERTISEMENT

ದಸರಾ: ಮಡಗಾಂವ್‌, ಬೀದರ್‌ಗೆ ವಿಶೇಷ ರೈಲು

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2025, 23:00 IST
Last Updated 11 ಸೆಪ್ಟೆಂಬರ್ 2025, 23:00 IST
   

ಬೆಂಗಳೂರು: ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ನೈರುತ್ಯ ರೈಲ್ವೆಯು ಯಶವಂತಪುರ–ಮಡಗಾಂವ್‌ ಮತ್ತು ಎಸ್ಎಂವಿಟಿ ಬೆಂಗಳೂರು–ಬೀದರ್ ನಡುವೆ ಒಂದು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಿದೆ.

ಸೆ.30ರಂದು ಮಧ್ಯಾಹ್ನ 12ಕ್ಕೆ ಯಶವಂತಪುರದಿಂದ ಹೊರಡುವ ವಿಶೇಷ ರೈಲು ಮರುದಿನ ಬೆಳಿಗ್ಗೆ 5.30ಕ್ಕೆ ಮಡಗಾಂವ್ ತಲುಪಲಿದೆ. ಅ.1ರಂದು ಬೆಳಿಗ್ಗೆ 6.30ಕ್ಕೆ ಮಡಗಾಂವ್‌ನಿಂದ ಹೊರಟು, ಅದೇ ದಿನ ರಾತ್ರಿ 11.40ಕ್ಕೆ ಯಶವಂತಪುರ ತಲುಪಲಿದೆ.

16 ಬೋಗಿಗಳ ಈ ರೈಲು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ADVERTISEMENT

ಎಸ್ಎಂವಿಟಿ ಬೆಂಗಳೂರಿನಿಂದ ವಿಶೇಷ ರೈಲು ಸೆ.30 ರಂದು ರಾತ್ರಿ 9.30ಕ್ಕೆ ಹೊರಡಲಿದ್ದು, ಮರುದಿನ ಬೆಳಿಗ್ಗೆ 11.30ಕ್ಕೆ ಬೀದರ್ ತಲುಪಲಿದೆ. ಅಕ್ಟೋಬರ್ 1ರಂದು ಮಧ್ಯಾಹ್ನ 1ಕ್ಕೆ ಬೀದರ್‌ನಿಂದ ಹೊರಡುವ ವಿಶೇಷ ರೈಲು ಮರುದಿನ ಬೆಳಿಗ್ಗೆ 4ಕ್ಕೆ ಎಸ್ಎಂವಿಟಿ ತಲುಪಲಿದೆ.

22 ಬೋಗಿಗಳ ಈ ರೈಲು ಎರಡೂ ದಿಕ್ಕುಗಳಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯ ರೋಡ್, ರಾಯಚೂರು, ಯಾದಗಿರಿ, ವಾಡಿ, ಶಹಾಬಾದ್, ಕಲಬುರಗಿ ಮತ್ತು ಹುಮನಾಬಾದ್‌ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.