ADVERTISEMENT

ಮಾನಹಾನಿ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ: ಡಿವಿಎಸ್‌ ಸ್ಪಷ್ಟನೆ

ಮಾಧ್ಯಮಗಳ ವಿರುದ್ಧ ನಗರ ಸಿವಿಲ್ ನ್ಯಾಯಾಲಯದಿಂದ ಸ್ಟೇ ತಂದ ಕೇಂದ್ರ ಸಚಿವ

​ಪ್ರಜಾವಾಣಿ ವಾರ್ತೆ
Published 3 ಜುಲೈ 2021, 4:35 IST
Last Updated 3 ಜುಲೈ 2021, 4:35 IST
ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ
ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ   

ಬೆಂಗಳೂರು: ತಮ್ಮ ಮಾನಕ್ಕೆ ಹಾನಿ ತರುವಯಾವುದೇ ಸುದ್ದಿಯನ್ನುಪ್ರಕಟಿಸಬಾರದು ಎಂದುಮಾಧ್ಯಮಗಳ ವಿರುದ್ಧ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಬೆಂಗಳೂರು ಸಿಟಿ ಸಿವಿಲ್‌ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದು ಈಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಈ ಮಧ್ಯೆ, ಟ್ವೀಟ್ ಮಾಡಿರುವ ಡಿವಿಎಸ್,‘ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಮುಂಚೆಯೂ ನನ್ನ ವೈಯಕ್ತಿಕ ತೇಜೋವಧೆಗೆ ಪ್ರಯತ್ನಿಸಿದ್ದರು. ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪು ಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ‌ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯಥಾ ಭಾವಿಸಬಾರದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT