ತ್ರಿವರ್ಣ ಧ್ವಜ
ಬೆಂಗಳೂರು: ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಗಸ್ಟ್ 15ರಂದು ನಡೆಯಲಿರುವ ರಾಜ್ಯಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆಗೆ ಪ್ರಥಮ ಬಾರಿಗೆ ಇ–ಪಾಸ್ ವ್ಯವಸ್ಥೆ ಜಾರಿಗೆ ತರಲಾಗಿದೆ.
ಕಾರ್ಯಕ್ರಮ ವೀಕ್ಷಿಸಲು ಆಸಕ್ತಿ ಹೊಂದಿರುವ ಸಾರ್ವಜನಿಕರು ಸೇವಾ ಸಿಂಧು ವೆಬ್‌ಸೈಟ್‌ನಿಂದ (www.sevasindhu.karnataka.gov.in) ಇ–ಪಾಸ್ ಪಡೆಯಬಹುದು.
ಪಾಸ್ ಪಡೆಯಲು ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ಆಧಾರ್ ಕಾರ್ಡ್‌ನ ವಿವರವನ್ನು ನಮೂದಿಸಿ ನೋಂದಾಯಿಸಿಕೊಳ್ಳಬಹುದು. ವೆಬ್‌ಸೈಟ್ ಲಾಗಿನ್ ಮಾಡಿ ಮೊಬೈಲ್ ಸಂಖ್ಯೆ ನಮೂದಿಸಿದ ನಂತರ ಬರುವ ಒಟಿಪಿ ಅನ್ನು ಅಳವಡಿಸಿ ಇ–ಪಾಸ್ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಪಾಸ್ ಹೊಂದಿರುವವರು ಬೆಳಿಗ್ಗೆ 8.15ಕ್ಕೆ ನಂ.4ರಿಂದ ಪ್ರವೇಶ ಪಡೆಯಬಹುದು. ನಂತರ, ಬಂದವರಿಗೆ ಪ್ರವೇಶ ಇರುವುದಿಲ್ಲ. ಪ್ರತಿ ಪಾಸ್‌ನಲ್ಲಿ ಒಬ್ಬರು ಮಾತ್ರ ಪ್ರವೇಶ ಪಡೆಯಬಹುದು. ಮುದ್ರಿತ ಅಥವಾ ಡಿಜಿಟಲ್ ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಆರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಇ–ಪಾಸ್ ಅವಶ್ಯ ಇರುವುದಿಲ್ಲ. ಪಾಸ್‌ಗಳ ಸಂಖ್ಯೆಯನ್ನು 3 ಸಾವಿರಕ್ಕೆ ಸೀಮಿತ ಮಾಡಲಾಗಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಇ–ಪಾಸ್ ಹೊಂದಿರುವವರಿಗೆ ಪಾರ್ಕಿಂಗ್ ಸೌಲಭ್ಯ ಒದಗಿಸುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.