ADVERTISEMENT

ಈಸ್ಟ್‌ ವೆಸ್ಟ್‌ ಕಾಲೇಜ್‌ನಿಂದ ಗ್ರಾಮ ಸ್ವಚ್ಛತೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2018, 20:24 IST
Last Updated 20 ನವೆಂಬರ್ 2018, 20:24 IST
ದೊಡ್ಡ ಮುದಿಗೆರೆ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ವಿದ್ಯಾರ್ಥಿಗಳು
ದೊಡ್ಡ ಮುದಿಗೆರೆ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ವಿದ್ಯಾರ್ಥಿಗಳು   

ಬೆಂಗಳೂರು: ನಗರದ ಈಸ್ಟ್‌ ವೆಸ್ಟ್‌ ಕಾಲೇಜ್‌ ಆಫ್‌ ಮ್ಯಾನೇಜ್‌ಮೆಂಟ್‌ ವತಿಯಿಂದ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕು ದೊಡ್ಡ ಮುದಿಗೆರೆ ಗ್ರಾಮದಲ್ಲಿ ಸ್ವಚ್ಛ ಭಾರತ ಅಭಿಯಾನ ನಡೆಯಿತು.

ಕಾಲೇಜಿನ ಎಂಬಿಎ, ಎಂ.ಕಾಂ ಮತ್ತು ಎಂಸಿಎ ಹಾಗೂ ಪದವಿ ವಿಭಾಗದಿಂದ 130 ವಿದ್ಯಾರ್ಥಿಗಳು ಭಾಗವಹಿಸಿ ಸ್ವಚ್ಛತೆ ಕೈಗೊಂಡರು. ರಸ್ತೆ, ಚರಂಡಿ, ಶಾಲಾ ಪರಿಸರ ಮತ್ತು ನಾಲ್ಕು ದೇವಸ್ಥಾನಗಳ ಸುತ್ತಮುತ್ತಲಿನ ಪರಿಸರ ಸ್ವಚ್ಛಗೊಳಿಸಲಾಯಿತು. ಬಳಿಕ ಅಲ್ಲಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು. ಗ್ರಾಮಸ್ಥರು ಮತ್ತು ಸ್ಥಳೀಯಾಡಳಿತ ಪ್ರತಿನಿಧಿಗಳು ವಿದ್ಯಾರ್ಥಿಗಳ ಕಾರ್ಯವನ್ನು ಶ್ಲಾಘಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT