ADVERTISEMENT

ಪರಿಸರ ಸ್ನೇಹಿ ಗಣೇಶ ಮೂರ್ತಿಗಳಿಗೆ ಮಾತ್ರ ಅವಕಾಶ: ಬಿಬಿಎಂಪಿ ಆಯುಕ್ತೆ ಸ್ನೇಹಲ್

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2025, 14:10 IST
Last Updated 21 ಆಗಸ್ಟ್ 2025, 14:10 IST
ಪರಿಸರ ಸ್ನೇಹಿ ಗಣಪ
ಪರಿಸರ ಸ್ನೇಹಿ ಗಣಪ   

ಬೆಂಗಳೂರು: ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಬಿಬಿಎಂಪಿ ಪೂರ್ವ ವಲಯ ಆಯುಕ್ತೆ ಸ್ನೇಹಲ್ ತಿಳಿಸಿದ್ದಾರೆ.

ಆಗಸ್ಟ್‌ 27ರಿಂದ ಸೆಪ್ಟೆಂಬರ್‌ 30ರವರೆಗೆ ಕಲ್ಯಾಣಿಯಲ್ಲಿ ಮೂರ್ತಿಗಳ ವಿಸರ್ಜನೆಗೆ ಅವಕಾಶ ನೀಡಲಾಗಿದೆ. ಸೆ. 1, 2 ಮತ್ತು ಸೆ.8, 9ರಂದು ಹೂಳೆತ್ತುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಆ ದಿನಗಳಲ್ಲಿ ಮೂರ್ತಿ ವಿಸರ್ಜನೆಗೆ ಅವಕಾಶ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ), ಥರ್ಮಾಕೋಲ್ ಹಾಗೂ ರಾಸಾಯನಿಕ ಬಣ್ಣಗಳನ್ನು ಬಳಸಿದ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಹಾಗೂ ವಿಸರ್ಜನೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.