ADVERTISEMENT

ಡ್ರಗ್ಸ್ ದಂಧೆ: ಇಸಿಐಆರ್ ದಾಖಲಿಸಿದ ಇ.ಡಿ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2020, 19:10 IST
Last Updated 12 ಸೆಪ್ಟೆಂಬರ್ 2020, 19:10 IST

ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಹವಾಲಾ ವ್ಯವಹಾರ ನಡೆದಿರುವ ಶಂಕೆಯಲ್ಲಿ ತನಿಖೆ ಆರಂಭಿಸಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು,ಜಾರಿ ಪ್ರಕರಣ ಮಾಹಿತಿ ವರದಿ (ಇಸಿಐಆರ್‌) ದಾಖಲಿಸಿಕೊಂಡಿದ್ದಾರೆ.

ಡ್ರಗ್ಸ್ ದಂಧೆಯ ವಹಿವಾಟಿನ ಕುರಿತುಸಿಸಿಬಿ ಕಚೇರಿಯಿಂದ ಮಾಹಿತಿ ಕಲೆ ಹಾಕಿರುವ ಅಧಿಕಾರಿಗಳು, ತನಿಖೆ ಚುರುಕುಗೊಳಿಸಿದ್ದಾರೆ.

ಬೆಂಗಳೂರಿನ ಡ್ರಗ್ಸ್ ಜಾಲದಲ್ಲಿ ಸಿಕ್ಕಿಬಿದ್ದಿರುವ ಆರೋಪಿಗಳಲ್ಲಿ ಕೆಲವರುವಿದೇಶದ ಡ್ರಗ್ಸ್ ದಂಧೆಕೋರರ ಜತೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ ಇದೆ. ಈ ಸಂದರ್ಭದಲ್ಲಿ ಹವಾಲಾ ವ್ಯವಹಾರ ನಡೆದಿದೆ ಎಂದು ಶಂಕಿಸಲಾಗಿದೆ.

ADVERTISEMENT

ಇಡೀ ಡ್ರಗ್ಸ್ ದಂಧೆಯಲ್ಲಿ ಅಕ್ರಮ ಹಣಕಾಸಿನ ವಹಿವಾಟು ನಡೆದಿರುವ ಬಗ್ಗೆ ತನಿಖೆ ನಡೆಸಲು ಇಸಿಐಆರ್ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.