ಬೆಂಗಳೂರು: ಠೇವಣಿದಾರರ ನೂರಕ್ಕೂ ಹೆಚ್ಚು ಕೋಟಿ ರೂಪಾಯಿಗಳನ್ನು ವಂಚಿಸಿದ ಪ್ರಕರಣದಲ್ಲಿ ನಗರದ ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್‌ನ ಮುಖ್ಯ ಕಚೇರಿ, ಶಾಖೆಗಳು ಸೇರಿ ಒಟ್ಟು ಹತ್ತು ಕಡೆಗಳಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬ್ಯಾಂಕ್‌ನ ಮುಖ್ಯಸ್ಥರಾಗಿದ್ದ ಶ್ರೀನಿವಾಸಮೂರ್ತಿ ಅವರು ಈಗಾಗಲೇ ಸಿಸಿಬಿ ಬಂಧನದಲ್ಲಿದ್ದಾರೆ. ಅವರ ಮನೆ, ಕಚೇರಿ, ಆಪ್ತರ ಕಚೇರಿಗಳಲ್ಲಿ ಗುರುವಾರ ಬೆಳಿಗ್ಗೆಯೇ ದಾಳಿ ನಡೆಸಿರುವ ಇ.ಡಿ ಅಧಿಕಾರಿಗಳು ಸಿಬ್ಬಂದಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.